Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ.

ಅಶ್ಲೀಲ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್​ಐಟಿ
ರಮೇಶ್​ ಜಾರಕಿಹೊಳಿ
Follow us
ರಾಜೇಶ್ ದುಗ್ಗುಮನೆ
|

Updated on: Mar 24, 2021 | 11:30 PM

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಾಕಷ್ಟು ಜನರನ್ನು ಕರೆದು ವಿಚಾರಣೆ ಕೂಡ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಎಸ್​ಐಟಿ ರಮೇಶ್ ಜಾರಕಿಹೊಳಿ ಮೊಬೈಲ್​ಅನ್ನು ವಶಕ್ಕೆ ಪಡೆದಿದೆ. 

ಅಶ್ಲೀಲ ಸಿಡಿಯಲ್ಲಿದ್ದ ಯುವತಿಗೆ ರಮೇಶ್​ ವಿಡಿಯೋ ಕಾಲ್ ಮಾಡಿದ್ದರು ಎನ್ನುವ ಆರೋಪ ಇದೆ. ಈ ಮಧ್ಯೆ, ಎಸ್​ಐಟಿ ವಿಚಾರಣೆ ವೇಳೆ ರಮೇಶ್​ ಜಾರಕಿಹೊಳಿ ಮರ್ಪಕವಾಗಿ ಉತ್ತರ ನೀಡಿರಲಿಲ್ಲ ಎಂದು ಮೂಲಗಳು ಹೇಳಿವೆ. ಹೀಗಾಗಿ, ಎಸ್​ಐಟಿ ಅಧಿಕಾರಿಗಳು ರಮೇಶ್ ಅವರ ಮೊಬೈಲ್​ಅನ್ನು ವಶಕ್ಕೆ ಪಡೆದಿದ್ದಾರೆ.

ರಮೇಶ್​ ಜಾರಕಿಹೊಳಿ ತಮಗೂ ಈ ಸಿಡಿಗೂ ಸಂಬಂಧ ಇಲ್ಲ. ಇದು ಎಡಿಟ್​ ಮಾಡಿದ ವಿಡಿಯೋ ಎಂದು ದೂರಿದ್ದರು. ಅಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಮನವಿ ಮಾಡಿದ್ದರು. ಈ ಬಗ್ಗೆ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, ‘ಸಚಿವ ರಮೇಶ್ ಜಾರಕಿಹೊಳಿ ಅವರ ವಿನಂತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ’ ಎಂದಿದ್ದರು.

ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಈಗ ತನಿಖೆಗೆ ನಡೆಸುತ್ತಿದೆ.  ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಎಲ್ಲಿ ತಯಾರಾಗಿದೆ, ವೆಬ್​ಸೈಟ್​ಗಳಿಗೆ ಎಲ್ಲಿಂದ ಅಪ್​ಲೋಡ್ ಆಯಿತು ಎಂಬ ಬಗ್ಗೆ ಈ ತನಿಖೆ ಬೆಳಕು ಚೆಲ್ಲಲಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಸಚಿವ ಸುಧಾಕರ್ ಪ್ರಶ್ನೆ

ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ