ಬೆಂಗಳೂರು, ಆಗಸ್ಟ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಸಂಕಷ್ಟ ಎದುರಾಗಿದೆ. ನಿಯಮ ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ (SSVM) ಕಂಪನಿಗೆ ಗಣಿ ಗುತ್ತಿಗೆ ಭೂಮಿ ಮಂಜೂರು ಮಾಡಿರುವ ಆರೋಪದಡಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಎಸ್ಐಟಿ (SIT) ರಾಜ್ಯಪಾಲರಿಗೆ ಪತ್ರ ಬರೆದಿದೆ.
ಹೆಚ್ಡಿ ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಎಸ್ಎಸ್ವಿಎಂ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿ ಉಲ್ಲೇಖ ಆಧರಿಸಿ ಎಸ್ಐಟಿ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ
ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಭಾರತೀಯ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಗಣಿ ಮತ್ತು ಖನಿಜ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ನ್ಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಎಸ್ಐಟಿ 2023 ನಂಬರ್ 21ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪ್ರಸ್ತಾವನೆ ಸಲ್ಲಿಸಿತ್ತು.
ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳನ್ನು ನೀಡುವಂತೆ ರಾಜ್ಯಪಾಲರು ಜುಲೈ 29 ರಂದು ಎಸ್ಐಟಿಗೆ ಪತ್ರ ಬರೆದರು. ಕೋರಿದ್ದ ಸ್ಪಷ್ಟನೆಗಳಿಗೆ ಉತ್ತರಗಳೊಂದಿಗೆ ಎಸ್ಐಟಿ ಸೋಮವಾರ ಸಂಜೆ ರಾಜ್ಯಪಾಲರಿಗೆ ಪತ್ರ ಬರೆಯಿತು. ಹಾಗೇ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:37 pm, Tue, 20 August 24