ಸೈಕಲ್​ಗೆ ಅಂಟಿಸಿದ್ದ ‘ಜೈ ಭೀಮ್’ ಸ್ಟಿಕ್ಕರ್‌ ವಿಚಾರಕ್ಕೆ 2 ಸಮುದಾಯದ ಯುವಕರ ನಡುವೆ ಗಲಾಟೆ, 6 ಯುವಕರಿಗೆ ಗಾಯ

ಓರ್ವ ಮುಸ್ಲಿಂ ಯುವಕ ತನ್ನ ಸೈಕಲ್​ ಮೇಲೆ ‘ಜೈ ಭೀಮ್’ ಸ್ಟಿಕ್ಕರ್‌ ಅಂಟಿಸಿದ್ದ. ಇದನ್ನು ಕಂಡ ನಾಯಕ ಸಮುದಾಯದ ಯುವಕ ಸ್ಟಿಕ್ಕರ್‌ ತೆಗೆಯುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಮಾತಿನ ಚಕಮಕಿ ಶುರುವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಸೈಕಲ್​ಗೆ ಅಂಟಿಸಿದ್ದ ‘ಜೈ ಭೀಮ್’ ಸ್ಟಿಕ್ಕರ್‌ ವಿಚಾರಕ್ಕೆ 2 ಸಮುದಾಯದ ಯುವಕರ ನಡುವೆ ಗಲಾಟೆ, 6 ಯುವಕರಿಗೆ ಗಾಯ
ಸೈಕಲ್​ಗೆ ಅಂಟಿಸಿದ್ದ ‘ಜೈ ಭೀಮ್’ ಸ್ಟಿಕ್ಕರ್‌ ವಿಚಾರಕ್ಕೆ 2 ಸಮುದಾಯದ ಯುವಕರ ನಡುವೆ ಗಲಾಟೆ
Follow us
TV9 Web
| Updated By: ಆಯೇಷಾ ಬಾನು

Updated on:May 17, 2022 | 10:48 PM

ರಾಯಚೂರು: ಸೈಕಲ್​ಗೆ “ಟಿಪ್ಪು ಟೈಗರ್..ಜೈ ಭೀಮ್” ಅಂತ ಬೋರ್ಡ್ ಹಾಕಿದ್ದ ವಿಚಾರಕ್ಕೆ ಗಲಾಟೆ ನಡೆದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯ ಸೋಮನಾಥ ನಗರದಲ್ಲಿ ನಡೆದಿದೆ. ಮುಸ್ಲಿಂ ಯುವಕರು ಹಾಗೂ ನಾಯಕ ಸಮುದಾಯದ ಯುವಕರ ನಡುವೆ ಗಲಾಟೆ ನಡೆದಿದ್ದು ಘಟನೆಯಲ್ಲಿ 6 ಯುವಕರಿಗೆ ಗಾಯಗಳಾಗಿವೆ.

ಓರ್ವ ಮುಸ್ಲಿಂ ಯುವಕ ತನ್ನ ಸೈಕಲ್​ ಮೇಲೆ ‘ಜೈ ಭೀಮ್’ ಸ್ಟಿಕ್ಕರ್‌ ಅಂಟಿಸಿದ್ದ. ಇದನ್ನು ಕಂಡ ನಾಯಕ ಸಮುದಾಯದ ಯುವಕ ಸ್ಟಿಕ್ಕರ್‌ ತೆಗೆಯುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಮಾತಿನ ಚಕಮಕಿ ಶುರುವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ 6 ಯುವಕರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮತ್ತೆ ಧಾರಕಾರ ಮಳೆ! ತೊಯ್ದು ತೊಪ್ಪೆಯಾದ ಬೆಂಗಳೂರಿಗರು; ರಾಜ್ಯದಲ್ಲಿ ಇನ್ನೂ 5 ದಿನ ವ್ಯಾಪಕ ಮಳೆಯಂತೆ!

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಆಗ್ರಹ ದಾವಣಗೆರೆ: ಅತ್ತಿಗೆರೆ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ(fatal assault) ಪ್ರಕರಣ ಸಂಬಂಧ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ(Protest) ನಡೆಯಿತು. ಚನ್ನಗಿರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಯ ಕಾರ್ಯಕರ್ತರು, ನಂತರ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ನಾಲ್ಕು ದಿನಗಳ ಹಿಂದೆ ದಾವಣಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದಲ್ಲಿ ದಲಿತ ಯುವಕ ಗಣೇಶ್ ಎಂಬಾತನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ ನಡೆದಿತ್ತು. ಹುಡುಗಿಗೆ ಮೆಸೆಜ್ ಮಾಡಿದ ಎಂಬ ಕಾರಣಕ್ಕೆ ಯುವಕನನ್ನು ಕರೆದು ಬುದ್ಧಿ ಹೇಳುವ ಬದಲು 60ಕ್ಕೂ ಹೆಚ್ಚು ಜನರಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ಸದ್ಯ ವಿಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: Gold-Silver Rate: ಬೆಂಗಳೂರು, ಪುಣೆ, ದೆಹಲಿ ಸೇರಿ ಪ್ರಮುಖ ನಗರಗಳಲ್ಲಿ ಮೇ 17ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ

ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಲಕ ಸಾವು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವಿ ಗ್ರಾಮದಲ್ಲಿ ಪ್ರಜ್ವಲ್ ತಿಗಡಿ(15) ಎಂಬ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೆಳೆಯರೊಂದಿಗೆ ಜಮೀನಿಗೆ ಹೋಗಿ ಮರಳುವಾಗ ಘಟನೆ‌ ನಡೆದಿದೆ. ಕೃಷಿ ಹೊಂಡದ ಮೇಲೆ ನಡೆದುಕೊಂಡು ಹೋಗುವಾಗ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 10:39 pm, Tue, 17 May 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್