ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಧರ್ಮೇಗೌಡ!

|

Updated on: Dec 29, 2020 | 7:41 AM

ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಧರ್ಮೇಗೌಡ!
Follow us on

ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ S.L.ಧರ್ಮೇಗೌಡ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಪರಿಷತ್‌ನಲ್ಲಿ ನಡೆದ ಗಲಾಟೆ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗೂ ಆಸ್ತಿ ಹಂಚಿಕೆ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಜೊತೆಗೆ ಮನೆಯವರ ಬಳಿ ಕ್ಷಮೆಯಾಚಿಸಿದ್ದಾರೆ. ಸದ್ಯ ಈಗ ಡೆತ್‌ನೋಟ್ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿಗಷ್ಟೇ ವಿಧಾನ ಪರಿಷತ್​ನಲ್ಲಿ ಸಭಾಪತಿ ಸ್ಥಾನಕ್ಕೆ ಗಲಾಟೆ ನಡೆದಿತ್ತು. ಈ ವೇಳೆ ಉಪಸಭಾಪತಿ ಧರ್ಮೇಗೌಡರನ್ನ ವಿಧಾನ ಪರಿಷತ್ ಸದಸ್ಯರು ತಳ್ಳಾಡಿ-ನೂಕಾಡಿ, ಸದನಕ್ಕೆ ಅಗೌರವ ತರೋದೇ ಅಲ್ದೆ, ರಾಜ್ಯದ ಜನ ತಲೆತಗ್ಗಿಸುವಂತಾ ಘಟನೆ ಪರಿಷತ್​ನಲ್ಲಿ ನಡೆದಿತ್ತು.

ವಿಧಾನ ಪರಿಷತ್ ಸಭಾಪತಿ ಪ್ರತಾಪ್​ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಈ ವೇಳೆ ಪ್ರತಾಪ್​ಚಂದ್ರ ಶೆಟ್ಟಿ ಸಭಾಪತಿ ಸ್ಥಾನದಲ್ಲಿ ಕೂರಲು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಒಪ್ಪಿರಲಿಲ್ಲ. ಆಗ ನಡೆದ ಗಲಾಟೆಯಿಂದ ರಾಜ್ಯದ ಘನತೆಗೆ ಕುಂದು ಬರುವಂತೆ ಪರಿಷತ್ ಸದಸ್ಯರು ನಡೆದುಕೊಂಡಿದ್ದು, ರಾಜ್ಯಾದ್ಯಂತ ತೀವ್ರ ಟೀಕೆಗೆ ಗುರಿಯಾಗಿತ್ತು.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ