AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಂ ಕೃಷ್ಣ ನಿಧನ: ತವರೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ

ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಬೆಂಗಳೂರಿನಿಂದ ಮಂಡ್ಯದ ಸೋಮನಹಳ್ಳಿಯವರೆಗೆ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯುತ್ತಿದೆ. ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಎಸ್​ಎಂ ಕೃಷ್ಣ ನಿಧನ: ತವರೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ
ಎಸ್​ಎಂ ಕೃಷ್ಣ
ವಿವೇಕ ಬಿರಾದಾರ
|

Updated on:Dec 11, 2024 | 9:18 AM

Share

ಬೆಂಗಳೂರು, ಡಿಸೆಂಬರ್​ 11: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.​ ಎಂ. ಕೃಷ್ಣ (SM Krishna) ಅವರು ನಿಧನರಾಗಿದ್ದಾರೆ. ಮಂಗಳವಾರ ನಸುಕಿನ ಜಾವ 2:30ರ ಸುಮಾರಿಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಕೊನೆಯುಸಿರು ಎಳೆದರು. ಎಸ್​ಎಂ ಕೃಷ್ಣ ಅವರ ಸಾವಿನ ಸುದ್ದಿ ಕೇಳಿ ರಾಜ್ಯ ಮತ್ತು ದೇಶದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ.

ಮಂಗಳವಾರ ಬೆಳಗ್ಗೆಯಿಂದ ಬುಧವಾರದ ಬೆಳಗ್ಗೆ 8 ಗಂಟೆಯವರೆಗೆ ಬೆಂಗಳೂರಿನ ಸದಾಶಿವನಗರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಸದಾಶಿವನಗರಕ್ಕೆ ಅನೇಕ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. ಎಸ್​ಎಂ ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಿದ್ದು, ಅವರ ತವರೂರು ಸೋಮದೇವನಹಳ್ಳಿಗೆ ತೆರಳಲಿದೆ.

ಅಂತಿಮ ಯಾತ್ರೆ ಮಾರ್ಗ

ತೆರೆದ ವಾಹನದಲ್ಲಿ ಅಂತಿಮ ಯಾತ್ರೆ ನಡೆಯಲಿದೆ. ಸದಾಶಿವನಗರದಿಂದ ಆರಂಭವಾಗುವ ಅಂತಿಮ ಯಾತ್ರೆ ಟೌನ್​ಹಾಲ್‌, ಮೈಸೂರು ಸರ್ಕಲ್‌, ರಾಜರಾಜೇಶ್ವರಿ ಆರ್ಚ್ ಮುಖಾಂತರ, ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಮೂಲಕ ಬೆಳಗ್ಗೆ 10.30 ಮದ್ದೂರಿಗೆ ತಲುಪಲಿದೆ. ಮಾರ್ಗ ಮಧ್ಯೆ ವಾಹನ ನಿಲ್ಲಿಸಿ 5 ರಿಂದ 10 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಪಾರ್ಥೀವ ಶರೀರ ಸೋಮನಹಳ್ಳಿಗೆ ತಲುಪಿದ ಬಳಿಕ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಒಕ್ಕಲಿಕ ಸಂಪ್ರದಾಯದಂತೆ ಅಂತ್ಯಕ್ರಿಯೆ

ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮಧ್ಯಾಹ್ನ 3 ಗಂಟೆಯ ನಂತರ ಶ್ರೀರಂಗಪಟ್ಟಣದ ಪುರೋಹಿತರಾದ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರದ ವಿಧಿ, ವಿಧಾನಗಳನ್ನು ನೇರವೇರಲಿವೆ. ಬಳಿಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ನಂತರ ಅಗ್ನಿಸ್ಪರ್ಶ ಮಾಡಲಾಗುತ್ತದೆ. ಎಸ್​ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾಗುತ್ತಾರೆ.

ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ವಿವಿಧ ಹೂವಿಗಳಿಂದ ಆಲಂಕಾರ ಮಾಡಲಾಗಿದೆ. ಇದಕ್ಕಾಗಿ ಸೇವಂತಿಗೆ, ಗುಲಾಬಿ ಚೆಂಡು ಹೂವು ಸೇರಿದಂತೆ ವಿವಿಧ ರೀತಿಯ 300 ಕೆಜಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ.

ಅಂತ್ಯಕ್ರಿಯೆಯಲ್ಲಿ ಗಣ್ಯರು ಭಾಗಿ

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಅನೇಕ ಶಾಸಕರು ಹಲವು ಗಣ್ಯ, ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ಪೊಲೀಸ್ ಬಂದೋಬಸ್ತ್

ಅಂತ್ಯಕ್ರಿಯೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಪೊಲೀಸ್ ಸಿಬ್ಬಂದಿಗಳನ್ನೂ ಬಂದೋಬಸ್​​ಗೆ ನಿಯೋಜನೆ ಮಾಡಲಾಗಿದೆ. ಡಿಐಜಿ ಬೋರಲಿಂಗಯ್ಯ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಡಿಐಜಿ, ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಖುದ್ದು ಸ್ಥಳದಲ್ಲೆ ಬೀಡು ಬಿಟ್ಟಿದ್ದಾರೆ. ಒಂದು ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಇಬ್ಬರು ಎಸ್​ಪಿ, ಮೂವರು ಹೆಚ್ಚುವರಿ ಎಸ್​ಪಿ, 10 ಮಂದಿ ಡಿಎಸ್​ಪಿ, 31 ಮಂದಿ ಪಿಐ, 70 ಮಂದಿ ಪಿಎಸ್​ಐ, 700 ಪೊಲೀಸ್ ಸಿಬ್ಬಂದಿ, 200 ಹೋಮ್ ಗಾರ್ಡ್, 6 ಕೆಎಸ್​ಆರ್​ಪಿ, 6 ಡಿಎಆರ್ ಸೇರಿದಂತೆ ಸಾವಿರುಕ್ಕೂ ಹೆಚ್ಚು ಜನರು ಬಂದೋಬಸ್ತ್​​ಗೆ ನಿಯೋಜಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:51 am, Wed, 11 December 24

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್