Mekedatu Padayatra: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಡಿಕೆ ಶಿವಕುಮಾರ್​ಗೆ ಎಸ್​ಎಂ ಕೃಷ್ಣ ಪತ್ರ

| Updated By: ganapathi bhat

Updated on: Jan 16, 2022 | 3:30 PM

ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ,

Mekedatu Padayatra: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಡಿಕೆ ಶಿವಕುಮಾರ್​ಗೆ ಎಸ್​ಎಂ ಕೃಷ್ಣ ಪತ್ರ
ಡಿಕೆ ಶಿವಕುಮಾರ್, ಎಸ್​ಎಂ ಕೃಷ್ಣ
Follow us on

ಬೆಂಗಳೂರು: ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಪತ್ರ ಬರೆದಿದ್ದಾರೆ. ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಹಮತ ಇದೆ. ಆದರೆ, ಇದು ಸೂಕ್ತ ಸಮಯವಲ್ಲ ಎಂದು ಎಸ್​.ಎಂ. ಕೃಷ್ಣ ಪತ್ರದ ಮುಖೇನ ತಿಳಿಸಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೆ (Mekedatu Padayatra) ಕರ್ನಾಟಕ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಪಾದಯಾತ್ರೆ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರದ (Karnataka Govt) ಸಿ.ಎಸ್‌. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಪಾದಯಾತ್ರೆಯ ವಾಹನ, ಜನರ ಸಂಚಾರ ನಿಷೇಧಕ್ಕೆ ಆದೇಶ ಹೊರಡಿಸಲಾಗಿದೆ. ರಾಮನಗರ ಜಿಲ್ಲಾಧಿಕಾರಿ, ಎಸ್​ಪಿ ಮೂಲಕ ಪಾದಯಾತ್ರೆಗೆ ಬ್ರೇಕ್ ಹಾಕಲು ತೀರ್ಮಾನಿಸಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಹೈಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಬೇಕಿರುವ ಹಿನ್ನೆಲೆ, ಮತ್ತೊಂದು ‌ಸೂಚನೆ ನೀಡುವ ಸಲುವಾಗಿ ನಿಷೇಧ ಹೇರಲಾಗಿದೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಪಾದಯಾತ್ರೆ ತಡೆಯುತ್ತೇವೆಂದು ಕೋರ್ಟ್​​ಗೆ ಅಫಿಡವಿಟ್ ಸಲ್ಲಿಸಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದೆ. ಪಾದಯಾತ್ರೆ ನಡೆಸದಂತೆ ಈವರೆಗೆ ನೀಡಿದ ನೋಟಿಸ್​ಗಳು, ಸೂಚನೆಗಳು, ಮೌಖಿಕ ಮನವಿ, ದಾಖಲಿಸಿರುವ FIR ಸೇರಿ ಎಲ್ಲ ವಿವರ ಒಳಗೊಂಡ ಅಫಿಡವಿಟ್​ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಸಚಿವರು, ಅಧಿಕಾರಿಗಳ ಜತೆ ಚರ್ಚೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ಆಕ್ಷೇಪ ಹಿನ್ನೆಲೆ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ. ದೂರವಾಣಿ ಮೂಲಕ ಚರ್ಚೆ ನಡೆಸಿದ ಸಿಎಂ ಬೊಮ್ಮಾಯಿ‌, ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಆರ್‌.ಅಶೋಕ್, ಡಾ.ಸುಧಾಕರ್, ಸಿಎಸ್ ರವಿಕುಮಾರ್, ಡಿಜಿ & ಐಜಿಪಿ ಸೂದ್, ಎಜಿ ನಾವದಗಿ ಜತೆ ಸಿಎಂ ಚರ್ಚೆ ಮಾಡಿದ್ದಾರೆ. ಸರ್ಕಾರದ ಮುಂದಿನ ನಿಲುವಿನ ಬಗ್ಗೆ ಬೊಮ್ಮಾಯಿ ಚರ್ಚಿಸಿದ್ದು ಸಾಂಕ್ರಾಮಿಕ ರೋಗಗಳ ಕಾಯ್ದೆಯನ್ವಯ ಕ್ರಮದ ಬಗ್ಗೆ ಮಾತುಕತೆ ನಡೆಸಲಾಗಿದೆ. ಕ್ರಮಕೈಗೊಳ್ಳುವ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೆ ಅನುಮತಿ ನೀಡದಂತೆ ಬಿಜೆಪಿ ಶಾಸಕರ ಒತ್ತಡ; ಬಿಜೆಪಿ ನಾಯಕರು ಹೇಳಿದ್ದೇನು?

ಇದನ್ನೂ ಓದಿ: Mekedatu Padayatra: ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ

Published On - 9:50 pm, Wed, 12 January 22