AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಎಂ ಕೃಷ್ಣ ಪತ್ನಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಾಂತ್ವನ: ಶೋಕ ಸಂದೇಶದಲ್ಲೇನಿದೆ ನೋಡಿ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಪತ್ನಿ ಪ್ರೇಮ ಕೃಷ್ಣ ಅವರಿಗೆ ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಂತ್ವನದ ನುಡಿಗಳನ್ನಾಡಿದ್ದಾರೆ. ಎಸ್ಎಂ ಕೃಷ್ಣ ಕೊಡುಗೆಗಳು ಮತ್ತು ಅವರ ನಾಯಕತ್ವವನ್ನು ಮೆಚ್ಚಿ ಶೋಕ ಸಂದೇಶಗಳನ್ನು ಕಳುಹಿಸಿರುವ ಮೋದಿ ಹಾಗೂ ಮುರ್ಮು, ಬೆಂಗಳೂರನ್ನು ತಂತ್ರಜ್ಞಾನ ಕೇಂದ್ರವಾಗಿ ಬೆಳೆಸುವಲ್ಲಿನ ಅವರ ಪಾತ್ರವನ್ನು ಪ್ರಸ್ತಾಪಿಸಿದ್ದಾರೆ. ಉಭಯ ನಾಯಕರ ಸಂದೇಶಗಳ ವಿವರ ಇಲ್ಲಿದೆ.

ಎಸ್​ಎಂ ಕೃಷ್ಣ ಪತ್ನಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಾಂತ್ವನ: ಶೋಕ ಸಂದೇಶದಲ್ಲೇನಿದೆ ನೋಡಿ
ಎಸ್​ಎಂ ಕೃಷ್ಣ ಪತ್ನಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸಾಂತ್ವನ
Ganapathi Sharma
|

Updated on: Dec 11, 2024 | 10:06 AM

Share

ಬೆಂಗಳೂರು, ಡಿಸೆಂಬರ್ 11: ಮಂಗಳವಾರ ನಸುಕಿನಲ್ಲಿ ನಿಧನರಾದ ಕರ್ನಾಟಕ ಮಾಜಿ ಸಿಎಂ ಎಸ್​ಎಂ ಕೃಷ್ಣ ಅವರ ಪತ್ನಿ ಪ್ರೇಮ ಕೃಷ್ಣಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಂತ್ವನ ಹೇಳಿದ್ದಾರೆ. ಪ್ರೇಮ ಕೃಷ್ಣಗೆ ಮೋದಿ ಹಾಗೂ ಮುರ್ಮು ಶೋಕ ಸಂದೇಶ ಕಳುಹಿಸಿದ್ದಾರೆ.

ಪ್ರಧಾನಿ ಮೋದಿ ಪತ್ರದಲ್ಲೇನಿದೆ?

ಶ್ರೀಮತಿ ಪ್ರೇಮ ಕೃಷ್ಣ ಜೀ, ಎಸ್​ಎಂ ಕೃಷ್ಣ ನಿಧನದ ಸುದ್ದಿ ಕೇಳಿ ದುಃಖಿತನಾದೆ. ಅವರ ಅಗಲುವಿಕೆಯ ನಷ್ಟವು ನಿರ್ವಾತವನ್ನು ಸೃಷ್ಟಿಸಿದೆ. ಒಬ್ಬ ದೂರದೃಷ್ಟಿಯುಳ್ಳ ಮತ್ತು ಅಸಾಧಾರಣ ನಾಯಕರಾಗಿದ್ದ ಎಸ್‌ಎಂ ಕೃಷ್ಣ ಅವರನ್ನು ರಾಜಕೀಯ ವಲಯದಾದ್ಯಂತ ಎಲ್ಲರೂ ಗೌರವಿಸಿದರು ಮತ್ತು ಮೆಚ್ಚಿದ್ದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯನ್ನು ರಾಜ್ಯದ ಜನತೆ ಸದಾ ಸ್ಮರಿಸುತ್ತಾರೆ. ಅವರು ಹಲವಾರು ಕ್ಷೇತ್ರಗಳ ಜನರ ಕಲ್ಯಾಣಕ್ಕಾಗಿ ಶ್ರಮಿಸಿದರು. ಪ್ರಮುಖವಾಗಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿಸ್ತರಣೆಗೆ ಅವರ ಕೊಡುಗೆಯು ಬೆಂಗಳೂರನ್ನು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಪರಿವರ್ತಿಸಲು ಸಹಾಯ ಮಾಡಿತು ಎಂದು ಪ್ರಧಾನಿ ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎಸ್​ಎಂ ಕೃಷ್ಣ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರೆ ಜತೆ ಜತೆಗೇ ಇತರ ಅನೇಕ ಜವಾಬ್ದಾರಿಗಳನ್ನು ನಿಭಾಯಿಸಿದ್ದರು ಎಂಬುದು ಅವರ ಅಸಾಧಾರಣ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅವರೊಬ್ಬ ಅಸಾಮಾನ್ಯ ಓದುಗ ಮತ್ತು ಆಳವಾದ ಚಿಂತಕರಾಗಿದ್ದರು. ಎಸ್ಎಂ ಕೃಷ್ಣ ಅವರೊಂದಿಗೆ ಹಲವಾರು ಬಾರಿ ಸಮಾಲೋಚನೆ ನಡೆಸಿದ್ದೇನೆ. ಆ ನೆನಪು ಸದಾ ಅಮರ ಎಂದು ಮೋದಿ ಉಲ್ಲೇಖಿಸಿದ್ದಾರೆ.

ಎಸ್​ಎಂ ಕೃಷ್ಣ ಅವರು ಹುಟ್ಟುಹಾಕಿದ ಮೌಲ್ಯಗಳು ಕುಟುಂಬಕ್ಕೆ ಸ್ಫೂರ್ತಿ ನೀಡಲಿ. ಅವರೊಂದಿಗೆ ಕಳೆದ ಸಮಯದ ನೆನಪುಗಳು ಈ ಕಷ್ಟದ ಸಮಯದಲ್ಲಿ ನಿಮಗೆ ಸಾಂತ್ವನ ಮತ್ತು ಧೈರ್ಯ ನೀಡಲಿವೆ. ಅವರು ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳನ್ನು ಅಗಲಿದ್ದಾರೆ. ಆದರೆ ಯಾವಾಗಲೂ ನಮ್ಮ ಹೃದಯದಲ್ಲಿ ನೆಲೆಸಿರುತ್ತಾರೆ. ಅವರ ನಿಧನಕ್ಕೆ ಹೃತ್ಪೂರ್ವಕ ಸಂತಾಪಗಳು ಮತ್ತು ಕುಟುಂಬದ ಜತೆ ನಾವಿದ್ದೇವೆ. ಅವರ ಅಸಂಖ್ಯಾತ ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ. ಓಂ ಶಾಂತಿ ಎಂದು ಎಸ್​ಎಂ ಕೃಷ್ಣ ಪತ್ನಿಗೆ ಕಳುಹಿಸಿದ ಶೋಕ ಸಂದೇಶದಲ್ಲಿ ಮೋದಿ ಬರೆದಿದ್ದಾರೆ.

ದ್ರೌಪದಿ ಮುರ್ಮು ಶೋಕ ಸಂದೇಶ

ಎಸ್​ಎಂ ಕಷ್ಣ ಅವರು ಅನುಭವಿ ಸಂಸದೀಯ ಪಟು ಮತ್ತು ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಶ್ರೇಷ್ಠ ನಾಯಕರಾಗಿದ್ದರು. ಕರ್ನಾಟಕದ ಮುಖ್ಯಮಂತ್ರಿಯಾಗಿ ಅವರು ರಾಜ್ಯದ ಆರ್ಥಿಕತೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಂಡಿದ್ದರು. ತೆಗೆದುಕೊಂಡರು. ಅವರ ನಿಧನದೊಂದಿಗೆ ದೇಶವು ಸಮರ್ಥ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ನಿಮಗೆ ಭಗವಂತ ಕರುಣಿಸಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಎಸ್​ಎಂ ಕೃಷ್ಣ ಸುದೀರ್ಘ ರಾಜಕೀಯ ಜೀವನದ ಹಿನ್ನೋಟ

ವಯೋಸಹಜ ಅನಾರೋಗ್ಯ ಮತ್ತು ಶ್ವಾಸಕೋಶ ಸಂಬಂಧಿತ ಸೋಂಕಿನಿಂದಾಗಿ ಎಸ್​ಎಂ ಕೃಷ್ಣ ಮಂಗಳವಾರ ನಸುಕಿನಲ್ಲಿ ನಿಧನರಾಗಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅರಳಿ ಮರ ಬಾಡುವುದಿಲ್ಲ ಯಾಕೆ?
ಅರಳಿ ಮರ ಬಾಡುವುದಿಲ್ಲ ಯಾಕೆ?
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?