Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?

ವಾರ್ಡ್ ಮಟ್ಟದ ಕಾಮಗಾರಿ ಮಾಡುತ್ತಿರೋದು ಸಣ್ಣ ಗುತ್ತಿಗೆದಾರರು. ನಾವು 5-6 ಬಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇವೆ. ಅವರು ಯಾವುದೇ ರೀತಿ ಕಮಿಷನ್​ಗೆ ಬೇಡಿಕೆ ಇಟ್ಟಿಲ್ಲ ಎಂದು ನಾಗೇಂದ್ರ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಪರ ವಹಿಸಿದ ಸಣ್ಣ, ಮಧ್ಯಮ ಗುತ್ತಿಗೆದಾರರು! ಡಿಸಿಎಂ ಬಗ್ಗೆ ಹೇಳಿದ್ದೇನು?
ಡಿಕೆ ಶಿವಕುಮಾರ್
Follow us
Vinay Kashappanavar
| Updated By: Ganapathi Sharma

Updated on: Aug 10, 2023 | 4:07 PM

ಬೆಂಗಳೂರು: ಕಾಮಗಾರಿಗಳ ಬಿಲ್ ಬಿಡುಗಡೆಯಾಗುತ್ತಿಲ್ಲ, ಬಿಲ್ ಬಿಡುಗಡೆಗೆ ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪಗಳ ನಡುವೆಯೇ ಸಣ್ಣ, ಮಧ್ಯಮ ಗುತ್ತಿಗೆದಾರರು (Small, Medium Contractors) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪರ ವಹಿಸಿ ಮಾತನಾಡಿದ್ದಾರೆ. ಬಾಕಿ ಬಿಲ್​ ಪಾವತಿಗೆ ಉಪ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗೇಂದ್ರ ಗುರುವಾರ ತಿಳಿಸಿದ್ದಾರೆ.

ಬೆಂಗಳೂರಿನ ಪ್ರೆಸ್​​ಕ್ಲಬ್​ನಲ್ಲಿ ಮಾತನಾಡಿದ ನಾಗೇಂದ್ರ, ಕಾಮಗಾರಿ ಬಗ್ಗೆ ಪರಿಶೀಲಿಸಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಹೇಮಂತ್​ರನ್ನು ಮಾಧ್ಯಮದ ಮುಖಾಂತರವೇ ‌ನೋಡಿರೋದು. ನಾವು ಆರೋಪ ಮಾಡಿದರೆ ಅದಕ್ಕೆ ಸೂಕ್ತ ದಾಖಲೆ ಇರಬೇಕು. ನಮ್ಮ ಬಳಿ ಯಾರೂ ಕೂಡ ಕಮಿಷನ್ ಕೇಳಿಲ್ಲ ಎಂದು ಹೇಳಿದ್ದಾರೆ.

ವಾರ್ಡ್ ಮಟ್ಟದ ಕಾಮಗಾರಿ ಮಾಡುತ್ತಿರೋದು ಸಣ್ಣ ಗುತ್ತಿಗೆದಾರರು. ನಾವು 5-6 ಬಾರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇವೆ. ಅವರು ಯಾವುದೇ ರೀತಿ ಕಮಿಷನ್​ಗೆ ಬೇಡಿಕೆ ಇಟ್ಟಿಲ್ಲ ಎಂದು ನಾಗೇಂದ್ರ ಹೇಳಿದ್ದಾರೆ.

ಈ ಮಧ್ಯೆ, ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಕೆಲವು ಸಚಿವರು ಸಲಹೆ ನೀಡಿದ್ದು, ಡಿಕೆ ಶಿವಕುಮಾರ್ ಅದನ್ನು ತಿರಸ್ಕರಿಸಿದ್ದಾರೆ. ಕಾಮಗಾರಿ ಆಗಿದೆಯಾ, ಇಲ್ಲವಾ ಅಂತಾ ತಿಳಿಯಲು ಸಮಿತಿ ರಚನೆ ಮಾಡಲಾಗಿದೆ. ಹಲವೆಡೆ ಕಾಮಗಾರಿಗಳೇ ಆಗಿಲ್ಲ. ಹೀಗಿದ್ದಾಗ ಬಿಲ್ ಬಿಡುಗಡೆ ಮಾಡುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಸಮಿತಿ ವರದಿ ನೀಡಿದ ಮೇಲೆ ಬಿಲ್ ಬಿಡುಗಡೆ ಮಾಡೋಣ ಎಂದು ಅವರು ಹೇಳಿದ್ದಾರೆ.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿರುವ ಕಮಿಷನ್ ಆರೋಪ

ನೂತನ ಕಾಂಗ್ರೆಸ್ ಸರ್ಕಾರ ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುತ್ತಿಲ್ಲ. ಬಿಲ್ ಬಿಡುಗಡೆ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಕೆಲವು ಮಂದಿ ಗುತ್ತಿಗೆದಾರರು ಆರೋಪ ಮಾಡಿದ್ದು, ಇದು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ, ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಇದನ್ನೂ ಓದಿ: ಕಮಿಷನ್ ಆರೋಪ: ಬಿಬಿಎಂಪಿ ಮುಖ್ಯ ಆಯುಕ್ತರಿಂದ ಸ್ಪಷ್ಟನೆಗೆ ಮುಂದಾದ ರಾಜ್ಯಪಾಲರು

ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ; ಕೋನರೆಡ್ಡಿ

ಗುತ್ತಿಗೆದಾರರಿಂದ ಡಿಕೆ ಶಿವಕುಮಾರ್ ವಿರುದ್ಧ ಕಮಿಷನ್​ ಆರೋಪಕ್ಕೆ ಸಂಬಂಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಶಾಸಕ ಎನ್​ಹೆಚ್​​ ಕೋನರೆಡ್ಡಿ ಪ್ರತಿಕ್ರಿಯಿಸಿದ್ದು, ಅಧಿಕಾರಕ್ಕೆ ಬಂದು 2 ತಿಂಗಳಾಯ್ತಷ್ಟೆ. ಇನ್ನೂ ಯಾವ ಟೆಂಡರ್​ ಕರೆದಿಲ್ಲ. ಬಿಜೆಪಿ ನಾಯಕರ ಆರೋಪ ಎದುರಿಸಲು ನಾವು ಗಟ್ಟಿಯಾಗಿದ್ದೇವೆ. ಡಿಕೆ ಶಿವಕುಮಾರ್ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಹಾಗಾಗಿ ಬಿಜೆಪಿಗೆ ಹೊಟ್ಟೆಕಿಚ್ಚು. ಕೃಷಿ ಸಚಿವರ ಮೇಲಿನ ಆರೋಪ ಸುಳ್ಳು ಎಂದು ಸಾಬೀತಾಗಿದೆ. ನಕಲಿ ಪತ್ರ ಎಂದು ಕೃಷಿ ಅಧಿಕಾರಿಗಳೇ ಹೇಳಿದ್ದಾರೆ ಎಂದು ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ