AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿದ್ದ ಜಿಎಸ್‌ಟಿ ನೋಟಿಸ್‌ನಿಂದ ಉಂಟಾಗಿದ್ದ ಗೊಂದಲಗಳನ್ನು ನಿವಾರಿಸಲಾಗಿದೆ. ಹಳೆ ತೆರಿಗೆ ಬಾಕಿಯನ್ನು ಸಂಪೂರ್ಣವಾಗಿ ಮನ್ನಾ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಸಣ್ಣ ವ್ಯಾಪಾರಿಗಳು ಫುಲ್ ಖುಷ್ ಆಗಿದ್ದು, ಜುಲೈ 25ರಂದು ಕರೆ ನೀಡಲಾಗಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದ್ದಾರೆ.

ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರ್ಕಾರ: ಸಣ್ಣ ವ್ಯಾಪಾರಿಗಳ ಮುಷ್ಕರ ವಾಪಸ್
Small Traders
ರಮೇಶ್ ಬಿ. ಜವಳಗೇರಾ
|

Updated on: Jul 23, 2025 | 7:04 PM

Share

ಬೆಂಗಳೂರು, (ಜುಲೈ 23): ಸಣ್ಣ ವ್ಯಾಪಾರಿಗಳಿಗೆ (small traders) ಜಿಎಸ್ಟಿ (GST)ನೋಟಿಸ್ ವಿರೋಧಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್‌ ಜುಲೈ 25ರಂದು ಕರೆ ನಿಡಿದ್ದ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. ಜಿಎಸ್‌ಟಿ ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಣ್ಣ ವರ್ತಕರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದು, ಸಿಎಂ ಸಿದ್ದರಾಮಯ್ಯನವರ ನಡೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ವರ್ತಕರ ತೆರಿಗೆ ಹಣವನ್ನು ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಇದರ ಬೆನ್ನಲ್ಲೇ ಸಣ್ಣ ವ್ಯಾಪಾರಿಗಳು ಜುಲೈ 25ರಂದು ಕರೆ ನೀಡಿದ್ದ ಬಂದ್ ವಾಪಸ್ ಪಡೆದುಕೊಂಡಿದ್ದಾರೆ. ಈ ಸಂಬಂಧ ಸಣ್ಣ ಪುಟ್ಟ ವ್ಯಾಪಾರಿಗಳ ಹೋರಾಟದ ನೇತೃತ್ವ ವಹಿಸಿದ್ದ ಕಾರ್ಮಿಕ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿ ಶೆಟ್ಟಿ ಬೈಂದೂರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸರ್ಕಾರದ ಭರವಸೆ ಬೆನ್ನಲ್ಲೇ ಪ್ರತಿಭಟನೆ ಕೈಬಿಡುವುದಾಗಿ ಘೋಷಿಸಿದರು.

ಇದನ್ನೂ ಓದಿ: ಸಣ್ಣ ವ್ಯಾಪಾರಿಗಳಿಗೆ ಬಿಗ್ ರಿಲೀಫ್‌:ನೋಟಿಸ್ ನೀಡಿದ್ರೂ ತೆರಿಗೆ ವಸೂಲಿ ಮಾಡಲ್ಲ, ಸಿಎಂ ಸ್ಪಷ್ಟನೆ

ಮೊದಲನೆಯದಾಗಿ ನಾವು ಈ ಕಪ್ಪು ಪಟ್ಟಿಯನ್ನು ವಾಪಸ್ಸು ತೆಗೆಯುತ್ತಿದ್ದೇವೆ . ಸರ್ಕಾರದ ಮರಣ ಶಾಸನ ಕೊನೆಗಾಣಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಸರ್ಕಾರ ಯಾವುದೇ ಷರತ್ತು ಹಾಕದೆ ಎಲ್ಲ ನೊಟೀಸ್ ವಾಪಸ್ ತೆಗೆದುಕೊಳ್ಳಲು ನಿರ್ಧಾರ ಮಾಡಿದೆ ಎಂದು ನನಗೆ ಮಾಹಿತಿ ಸಿಕ್ಕಿದೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೆ ಇದ್ದಲ್ಲೇ ನಾಳೆ ಫ್ರೀಡಂ ಪಾರ್ಕಿನಲ್ಲಿ ಲಕ್ಷಾಂತರ ಜನ ಸೇರುತ್ತಿದ್ದರು. ಸರ್ಕಾರ ಮತ್ತೆ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದ ರೀತಿ ನೋಡಿಕೊಳ್ಳಬೇಕು . ನಮ್ಮ ಹಲವು ದಿನಗಳ ಹೋರಾಟ ನಿಜಕ್ಕೂ ಒಂದು ಸುಖಾಂತ್ಯ ಕಂಡಿದೆ. ಇದಕ್ಕೆ ಖುಷಿ ಆಗುತ್ತಿದೆ ಎಂದು ಭಾವೋದ್ವೇಗಕ್ಕೆ ಒಳಗಾದರು.

ಈ ಕುರಿತು ಚಿಕ್ಕಪೇಟೆ ಟ್ರೇಡರ್ಸ್ ವರ್ತಕರ ಸಂಘದ ಸದಸ್ಯ ಸಜ್ಜನ್ ಮೆಹತಾ ಟಿವಿ9ಗೆ ಪ್ರತಿಕ್ರಿಯಿಸಿ, FKCCI ಸೇರಿದಂತೆ ಹಲವು ಸಂಘ ಸಂಸ್ಥೆಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ. ಹೀಗಾಗಿ ಪ್ರತಿಭಟನೆ, ರ್ಯಾಲಿ ನಮ್ಮ ಅಸೋಸಿಯೇಷನ್ ವಾಪಾಸ್ ಪಡೆದಿದೆ. ಬಂದ್ ಮಾಡಿದ್ರೆ ಬೆಂಗಳೂರಿನ ಬ್ಯುಸಿನೆಸ್ ಹಾಳಾಗುತ್ತೆ. ನಮ್ಮ ಬ್ಯುಸಿನೆಸ್ ತುಮಕೂರಿಗೆ ಹೋಗುತ್ತೆ. ಸರ್ಕಾರ 40 ಲಕ್ಷದಿಂದ 5 ಕೋಟಿ ರೂ.ವರೆಗೆ ಇದ್ದವರಿಗೆ ನೋಟಿಸ್ ಕೊಟ್ಟಿದೆ. ಹಳೆ ಅರಿಯರ್ಸ್ ಪರಿಹಾರ ಮಾಡುತ್ತಾರೆ. ಸಿಎಂ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಹೀಗಾಗಿ ನಾಳೆಯ ಪ್ರತಿಭಟನೆ ಕೈ ಬಿಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್