ಸ್ಮಾರ್ಟ್ ಮೀಟರ್ ಹಗರಣ ಆರೋಪ: ಊಹಾಪೋಹಗಳಿಗೆ ಕೆಪಿಟಿಸಿಎಲ್ ಎಂಡಿ ಸ್ಪಷ್ಟನೆ
ಕೆಪಿಟಿಸಿಎಲ್‌ನ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಗರಣದ ಆರೋಪಗಳಿಗೆ ಸಂಬಂಧಿಸಿದಂತೆ ಎಂ.ಡಿ. ಪಂಕಜ್ ಕುಮಾರ್ ಪಾಂಡೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉತ್ತರ ಪ್ರದೇಶ ಮತ್ತು ಪಂಜಾಬ್‌ನಿಂದ ವಿದ್ಯುತ್ ಖರೀದಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹೊಸ ಮನೆಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯ ಎಂದು ಹೇಳಿದ್ದಾರೆ.

ಬೆಂಗಳೂರು, ಮಾರ್ಚ್ 24: ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ (Smart meter) ಹಗರಣ ನಡೆದಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿದೆ. ನಿನ್ನೆಯಷ್ಟೇ ವಿದ್ಯುತ್ ಬಿಲ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,500 ಕೋಟಿ ರೂ ಹಗರಣ ನಡೆಸುವ ಮೂಲಕ ಜನರ ಹಣ ಲೂಟಿ ಮಾಡಿರುವುದು ಬಯಲಾಗಿದೆ ಎಂದು ಬಿಜೆಪಿ ಕೂಡ ಆರೋಪ ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಪಿಟಿಸಿಎಲ್ (kptcl) ಎಂ.ಡಿ ಪಂಕಜ್ ಕುಮಾರ್ ಪಾಂಡೆ ಸ್ಪಷ್ಟನೆ ನೀಡಿದ್ದಾರೆ.
ಎಲ್ಲರೂ ಮನೆಗೂ ಸ್ಮಾರ್ಟ್ ಮೀಟರ್ ಹಾಕಿಸಿ: ಕೆಪಿಟಿಸಿಎಲ್ ಎಂ.ಡಿ ಪಂಕಜ್ ಕುಮಾರ್
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಟಿಸಿಎಲ್ ಎಂ.ಡಿ ಪಂಕಜ್ ಕುಮಾರ್ ಪಾಂಡೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಮಾಡಿ ಅಂತ ಕೆಇಆರ್ಸಿ ಹೇಳಿದೆ. ಬೇರೆ ಬೇರೆ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಇದೆ. ಕೇಂದ್ರ ಸರ್ಕಾರ ಸೂಚನೆ ಸಹ ಇದೆ. ಹೊಸ ಕನೆಕ್ಷನ್ ತೆಗೆದುಕೊಳ್ಳುವಾಗ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗಿದೆ. ಸ್ಮಾರ್ಟ್ ಮೀಟರ್ ಮನೆಗಳಿಗೆ ಹಾಕಿದರೆ, ಮೀಟರ್ ಲೀಡರ್ ಮನೆಗೆ ಹೋಗುವ ಅವಶ್ಯಕತೆ ಇರೋದಿಲ್ಲ, ಹಾಗಾಗಿ ಎಲ್ಲರ ಮನೆಗೂ ಸ್ಮಾರ್ಟ್ ಮೀಟರ್ ಹಾಕಿಸಿ. ಅದರಲ್ಲೂ ಹೊಸ ಮನೆಗಳಲ್ಲಿ ಎಲ್ಲರೂ ಕೂಡ ಈ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಹೇಳಿದ್ದಾರೆ.
ಇದನ್ನೂ ಓದಿ: Electricity Price Hike: ವಿದ್ಯುತ್ ದರ ಏರಿಕೆ, ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್ಸಿ
ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದೆ. ಮಾರ್ಚ್ನಲ್ಲಿ ವಿದ್ಯುತ್ ಬೇಡಿಕೆ 18,395 ಮೆಗಾವ್ಯಾಟ್ ಇದೆ. ಕಳೆದ ವರ್ಷಕ್ಕಿಂತ 15 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಕಳೆದ ನವಂಬರ್ನಲ್ಲಿ 14,856 ಮೆಗಾವ್ಯಾಟ್ ಇತ್ತು. ಏಪ್ರಿಲ್, ಮೇನಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುತ್ತೆ. ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ 17,220 ಮೆಗಾವ್ಯಾಟ್ ಇತ್ತು. ಈ ವರ್ಷ 18,500 MW ವರೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲಿದೆ. ಕೈಗಾರಿಕಾ ವಲಯದಲ್ಲಿ ಶೇ 15 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ ಎಂದು ತಿಳಿಸಿದರು.
ಉತ್ತರ ಪ್ರದೇಶ, ಪಂಜಾಬ್ ಎರಡು ರಾಜ್ಯಗಳಿಂದ ಮೇ ವರೆಗೆ ವಿದ್ಯುತ್ ಖರೀದಿ ಮಾಡಲಾಗುತ್ತೆ. ಉತ್ತರ ಪ್ರದೇಶದಿಂದ 1400, ಪಂಜಾಬ್‌ನಿಂದ 200-300 mW ವಿದ್ಯುತ್ ಖರೀದಿ ಮಾಡಲಾಗುತ್ತಿದ್ದು, ಜೂನ್ ನಂತರ ರಾಜ್ಯದಿಂದ ಪಂಜಾಬ್, ಯುಪಿಗೆ ವಿದ್ಯುತ್ ಸರಬರಾಜು ಮಾಡುತ್ತೇವೆ. ರೈತರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಸರಬರಾಜು ಮಾಡಲಾಗುತ್ತೆ. ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾವುದೇ ಸಮಸ್ಯೆ ಆಗದಂತೆ ವಿದ್ಯುತ್ ನೀಡಲಾಗುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ: ಬಿ.ವೈ ವಿಜಯೇಂದ್ರ
ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಗರಣ ಬಗ್ಗೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದು, ದೇಶದ ಇತರ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ 9,00 ರೂ ಪಾವತಿಸಿದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬರೋಬ್ಬರಿ 8,510 ರೂ. ದರ ನಿಗದಿ ಮಾಡಿರುವುದು ಹಗಲು ದರೋಡೆಯಲ್ಲದೇ ಬೇರೇನೂ ಅಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಇದನ್ನೂ ಓದಿ: ಗೃಹಜ್ಯೋತಿ ದುಡ್ಡು ಸರ್ಕಾರ ಕೊಡದಿದ್ರೆ ಜನರಿಂದಲೇ ವಸೂಲಿ? ಎಸ್ಕಾಂಗಳ ಪ್ರಸ್ತಾವಕ್ಕೆ ಬಿಜೆಪಿ ಕಿಡಿ
ಬರಿದಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ 400-800 ರಷ್ಟು ದರ ಏರಿಕೆ ಮಾಡಿರುವುದು ಗ್ಯಾರಂಟಿ ನಂಬಿ ಮತ ನೀಡಿದ ನಾಡಿನ ಜನರ ದುರ್ದೈವವೇ ಸರಿ ಎಂದು ಕಿಡಿಕಾರಿದ್ದಾರೆ.
ಬಿ.ವೈ ವಿಜಯೇಂದ್ರ ಟ್ವೀಟ್
ನಿನ್ನೆಯಷ್ಟೇ ವಿದ್ಯುತ್ ಬಿಲ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,500 ಕೋಟಿ ಹಗರಣ ನಡೆಸುವ ಮೂಲಕ ಜನರ ಹಣ ಲೂಟಿ ಮಾಡಿರುವುದು ಬಯಲಾಗಿದೆ. ದೇಶದ ಇತರ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ 9,00 ರೂ ಪಾವತಿಸಿದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬರೋಬ್ಬರಿ 8,510 ರೂ. ದರ ನಿಗದಿ… pic.twitter.com/ld8nP7GG5p
— Vijayendra Yediyurappa (@BYVijayendra) March 22, 2025
ದಪ್ಪ ಚರ್ಮದ ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿಕೋರತನ ನಿಲ್ಲಿಸಿ ವಿದ್ಯುತ್ ಸ್ಮಾರ್ಟ್ ಮೀಟರ್ ದರವನ್ನು ಈ ಹಿಂದಿನಂತೆಯೇ ನಿಗದಿಪಡಿಸದಿದ್ದರೆ ಬಿಜೆಪಿ ನಾಡಿನ ಜನಸಾಮಾನ್ಯರ ಪರವಾಗಿ ಹೋರಾಟಕ್ಕಿಳಿಯಲಿದೆ ಎಂದು ಎಚ್ಚರಿಸಬಯಸುತ್ತೇನೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:21 pm, Mon, 24 March 25