ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಾಳೆ ನಡೆಯಲಿರುವ 77ನೇ ಗಣರಾಜ್ಯೋತ್ಸವ ಆಚರಣೆ ವೇಳೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ಇಪಾಹಾರದ ಭಾಗವಾಗಿ ಇರಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರೇ ಎಕ್ಸ್ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಜನವರಿ 25: 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗ 8.55ಕ್ಕೆ ರಾಜ್ಯಪಾಲರು ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನಡೆದು, ರಾಜ್ಯಪಾಲರು ತೆರೆದ ಜೀಪಿನಲ್ಲಿ ಪರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ನಾಳೆ ಬೆಳಿಗ್ಗೆ ಮಾಣೆಕ್ ಷಾ ಪರೇಡ್ ಗ್ರೌಂಡ್‌ನಲ್ಲಿ ವಿತರಿಸಲಾಗುವ ಉಪಹಾರದ ಭಾಗವಾಗಲಿವೆ. ಈ ಬಗ್ಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರೇ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.