ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆಯು ಹಾವು ಕಡಿತವನ್ನೂ ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.

ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತ ಸೇರ್ಪಡೆ: ಆರೋಗ್ಯ ಇಲಾಖೆ
ಹಾವು
Follow us
ವಿವೇಕ ಬಿರಾದಾರ
|

Updated on:Feb 20, 2024 | 10:49 AM

ಬೆಂಗಳೂರು, ಫೆಬ್ರವರಿ 20: ಕರ್ನಾಟಕ ಆರೋಗ್ಯ ಇಲಾಖೆಯು (Karnataka Health Department) ಹಾವು ಕಡಿತವನ್ನೂ (Snakebite) ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ 2023-24ರ ಸಾಲಿನಲ್ಲಿ ಹಾವು ಕಡಿತ ತಡೆಗಟ್ಟುವ ಕಾರ್ಯಕ್ರಮ ಆರಂಭಿಸಲಾಗಿದೆ. ರಾಜ್ಯದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹಾವು ಕಡಿತ ಚಿಕಿತ್ಸೆಗೆ ಒಳರೋಗಿ, ಹೊರರೋಗಿಯಾಗಿ ದಾಖಲಾದವರು, ಮರಣ ಉಂಟಾದ ಪ್ರಕರಣಗಳು ಸಹಿತ ಎಲ್ಲ ಮಾಹಿತಿಗಳನ್ನು ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳು, ವೈದ್ಯಕೋಯ ವಿಜ್ಞಾನ ಸಂಸ್ಥೆಗಳು ಕಡ್ಡಾಯವಾಗಿ ಭಾರತ ಸರ್ಕಾರದ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯಲ್ಲಿ ದಾಖಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

2023 ರಲ್ಲಿ ಕರ್ನಾಟಕದಲ್ಲಿ 6,595 ಜನರಿಗೆ ಹಾವುಗಳು ಕಡದಿವೆ. ಇದರಲ್ಲಿ 19 ಜನರು ಮೃತಪಟ್ಟಿದ್ದಾರೆ. ಈ ವರ್ಷ, ಅಧಿಕೃತ ಅಂಕಿಅಂಶಗಳ ಪ್ರಕಾರ, ಇದುವರೆಗೆ 543 ಜನರಿಗೆ ಹಾವುಗಳು ಕಡಿದಿವೆ.

ಇದನ್ನೂ ಓದಿ: ಬೈಕ್ ಓಡಿಸುವಾಗ ಏನೋ ಸಪ್ಪಳ ಬಂತೆಂದು ನೋಡಿದ್ರೆ ನಾನೇ ಎಂದು ಹೆಲ್ಮೆಟ್​ನಿಂದ ಇಣುಕಿದ ನಾಗರ ಹಾವು

ಹಾವು ಕಡಿತವನ್ನು ಯಶಸ್ವಿಯಾಗಿ ತಡೆಗಟ್ಟಲು ಮತ್ತು ಚಿಕಿತ್ಸೆ ನೀಡಲು ಯಾವುದೇ ಮಧ್ಯಸ್ಥಿಕೆಗಾಗಿ, ಅದರ ಹರಡುವಿಕೆಯ ದತ್ತಾಂಶ ಸಂಗ್ರಹವು ಮೊದಲ ಹೆಜ್ಜೆಯಾಗಿದೆ. ಈ ರೋಗದ ವರದಿಯನ್ನು ಕಡ್ಡಾಯಗೊಳಿಸುವ ಮೂಲಕ ರಾಜ್ಯ ಸರ್ಕಾರ ಉತ್ತಮ ಹೆಜ್ಜೆ ಅನುಸರಿಸಿದೆ.

ಸೆಂಟರ್ ಫಾರ್ ಒನ್ ಹೆಲ್ತ್ ಅಟ್ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಚಟುವಟಿಕೆಗಳ ಅನುಷ್ಠಾನವನ್ನು ಸಮನ್ವಯಗೊಳಿಸುತ್ತಿದೆ. ಈ ಕ್ಷೇತ್ರದ ಸಂಬಂಧಿತ ತಜ್ಞರೊಂದಿಗೆ ಸಮಾಲೋಚಿಸಿ ಸರ್ಕಾರ ‘ಒನ್ ಹೆಲ್ತ್ ಅಪ್ರೋಚ್’ನೊಂದಿಗೆ ಹಾವು ಕಡಿತ  ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕ್ರಿಯಾ ಯೋಜನೆ’ ಅನ್ನು ರಚಿಸಿದೆ. ಎನ್​ಎಪಿಎಸ್​ಇ ಯ ಉದ್ದೇಶವು ಭಾರತದಲ್ಲಿ 2030 ರ ವೇಳೆಗೆ ಹಾವು ಕಡಿತಕ್ಕೆ ಸಂಬಂಧಿಸಿದ ಮರಣ ಮತ್ತು ಅಂಗವೈಕಲ್ಯವನ್ನು ಅರ್ಧದಷ್ಟು ಕಡಿಮೆ ಮಾಡುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:48 am, Tue, 20 February 24

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ