AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಕೇಸ್ ಸಂಕಷ್ಟ: ಏನದು?

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿರುವ ದೂರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಈ ಪ್ರಕರಣದಿಂದ ಹೇಗೆ ಹೊರಬರಬೇಕೆಂದು ಕಾನೂನು ಪಂಡಿತರ ಸಲಹೆ ಸೂಚನೆಗಳ ಮೇರಗೆ ಹೆಜ್ಜೆ ಇಡುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ್ದಾರೆ.

ಮುಡಾ ಹಗರಣ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಕೇಸ್ ಸಂಕಷ್ಟ: ಏನದು?
ಸಿಎಂ ಸಿದ್ದರಾಮಯ್ಯ
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on:Feb 03, 2025 | 5:24 PM

Share

ಮೈಸೂರು, (ಫೆಬ್ರವರಿ 03): ಮುಡಾ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಎ1 ಆರೋಪಿಯಾಗಿರುವ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯನ್ನು ಲೋಕಾಯಕ್ತ ಮಾಡಿದೆ. ಅಲ್ಲದೇ ಈ ಪ್ರಕರಣದಲ್ಲಿ ಇಡಿ ಸಹ ಪ್ರವೇಶ ಮಾಡಿದ್ದು, ಸಿದ್ದರಾಮಯ್ಯಗೆ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಬೇನಾಮಿ ಆಸ್ತಿ ಹೊಂದಿದ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೇನಾಮಿ ಆಸ್ತಿ ಸಂಬಂಧ ಸ್ನೇಹಯಿ ಕೃಷ್ಣ ಅವರು ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.  ಒಂದು ಕಪ್ಪು ಚುಕ್ಕೆ ಇಲ್ಲದೇ ರಾಜಕಾರಣಿ ಎನ್ನುತ್ತಿದ್ದ ಸಿದ್ದರಾಮಯ್ಯಗೆ ಮುಡಾ ಹಗರಣ ಕಂಟಕವಾಗಿದೆ. ಈ ಪ್ರಕರಣ ತನಿಖೆ ಹಂತದಲ್ಲಿರುವಾಗೇ ಇದೀಗ ಬೇನಾಮಿ ಆಸ್ತಿ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಮೈಸೂರು ತಾಲೂಕು ಆಲನಹಳ್ಳಿ ಗ್ರಾಮದ ಸರ್ವೆ ನಂ 113/4ರಲ್ಲಿ 1 ಎಕರೆ ಭೂಮಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 1983ರ ಡಿಸೆಂಬರ್ 15 ರಂದು ಆಲನಹಳ್ಳಿಯ ಹನುಮೇಗೌಡ, ಹನುಮಯ್ಯ, ಕರಿಯಪ್ಪ ಹಾಗೂ ಕೆಂಪಮ್ಮ ಎಂಬುವರಿಂದ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ. 1996ರಲ್ಲಿ ಅಂತಿಮ ಅಧಿಸೂಚನೆ‌ ಆಗಿರುವ ಭೂಮಿಯನ್ನು ಮಲ್ಲಿಕಾರ್ಜುನ ಸ್ವಾಮಿ ಡಿನೋಟಿಫೈ ಮಾಡಿಸಿದ್ದು, 2006 ರಲ್ಲಿ ಮಲ್ಲಿಕಾರ್ಜುನಸ್ವಾಮಿಯಿಂದ ಕೃಷಿ ಭೂಮಿಯನ್ನು ಅನ್ಯಕ್ರಾಂತ ಮಾಡಿಸಿ ಆದೇಶ ಹೊರಡಿಸಲಾಗಿದೆ. ಅದೇ ಭೂಮಿಯನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 2010 ಅಕ್ಟೋಬರ್ 20ರಲ್ಲಿ ದಾನ ಮಾಡಿದ್ದಾರೆ. ಪಾರ್ವತಿ ಕೂಡ 2010ರ ನವೆಂಬರ್ 11ರಂದು ತಮ್ಮ‌ ಮಗ ಯತೀಂದ್ರ ಸಿದ್ದರಾಮಯ್ಯಗೆ ದಾನ ಮಾಡಿದ್ದಾರೆ. ತಮ್ಮ ಹೆಸರಿಗೆ ಭೂಮಿ ಬಂದ ಒಂದೇ ತಿಂಗಳಲ್ಲಿ ದಾನ ಮಾಡಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ತಮಗೆ ಬಂದ ಭೂಮಿಯನ್ನ 2011ರ ಮಾರ್ಚ್ 23 ರಂದು ಬೇರೆಯವರಿಗೆ ಮಾರಾಟ ಮಾಡಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.

Published On - 5:21 pm, Mon, 3 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!