ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಹಿಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ ಎಂದು ಹೇಳಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR:ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on:Sep 27, 2024 | 4:57 PM

ಚಾಮರಾಜನಗರ, ಸೆಪ್ಟೆಂಬರ್ 27: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯ ಸೂಚಿಸಿದ್ದ ಸೆಕ್ಷನ್ ಅಡಿಯಲ್ಲಿ ಎಫ್​​ಐಆರ್ ದಾಖಲಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು,  ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.

ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದ ಸ್ನೇಹಮಹಿ ಕೃಷ್ಣ 

ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್​ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್​ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.

ಒಂದು ಮೊಬೈಲ್ ಫೋನ್​ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್​ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು, ಮುಂದೇನು?

ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲವೆಂಬ ಸಿಎಂ ಹೇಳಿದ್ದಾರೆ. ಒಂದೊಂದು ಸಮಯದಲ್ಲಿ ಸಿದ್ದರಾಮಯ್ಯ ಒಂದೊಂದು ರೀತಿ ವರ್ತಿಸಿದ್ದಾರೆ. ಬೇರೆಯವರ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದರು. ಆದರೆ ತಮ್ಮ ವಿರುದ್ದ ದೂರು ದಾಖಲಾದಾಗ ಉಲ್ಟಾ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ನೈತಿಕ ಬೆಲೆ ಹೊತ್ತು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:56 pm, Fri, 27 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ