ಚಾಮರಾಜನಗರ, ಸೆಪ್ಟೆಂಬರ್ 27: ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ ಲೋಕಾಯುಕ್ತ ಪೊಲೀಸರಿಂದ ನ್ಯಾಯಾಲಯ ಸೂಚಿಸಿದ್ದ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ದೂರುದಾರ ಸ್ನೇಹಮಹಿ ಕೃಷ್ಣ ಪ್ರತಿಕ್ರಿಯಿಸಿದ್ದು, ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ನೇಹಮಹಿ ಕೃಷ್ಣ, ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್ಐಆರ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ ಎಂದು ಹೇಳಿದ್ದಾರೆ.
ಈ ದೇಶದ ಜನತೆ ಇಂತಹ ಭ್ರಷ್ಟಾಚಾರ ಮಾಡುವಂತ ಅಕ್ರಮಗಳನ್ನ ತಡೆಗಟ್ಟಬೇಕು. ಎಫ್ಐಆರ್ ದಾಖಲಾದರೂ ಲೋಕಾಯುಕ್ತ ಎಸ್.ಪಿ ಉದೇಶ್ ವಿರುದ್ದ ಕಾನೂನು ಹೋರಾಟ ನಿಶ್ಚಿತ. ಎಸ್.ಪಿ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಹಾಗೂ ಆದೇಶದ ಬಳಿಕ ಈಗ ಎಫ್ಐಆರ್ ಮಾಡಿದ್ದಾರೆ. ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ ಅದಕ್ಕೆ ಶಿಕ್ಷೆ ಕೊಡಿಸುವುದು ಖಚಿತ. ಈ ಪ್ರಕರಣವನ್ನು ಸಿಬಿಐಗೆ ಖಂಡಿತ ಕೊಡಿಸುತ್ತೇನೆ ಎಂದಿದ್ದಾರೆ.
ಒಂದು ಮೊಬೈಲ್ ಫೋನ್ಗೆ ಹೆದರಿ ಕೊಳ್ಳುವಂತಹ ಎಸ್.ಪಿ ಉದೇಶ್ ಪ್ರಮಾಣಿಕ ತನಿಖೆ ನಡೆಸುತ್ತಾರಾ? ಪ್ರಕರಣ ಸಿಬಿಐಗೆ ಹೋಗುವವರೆಗೂ ನಿರಂತರ ಹೋರಾಟ ಮಾಡುತ್ತೇನೆ. ಸೋಮವಾರ ಹೈ ಕೋರ್ಟ್ನಲ್ಲಿ ನಮ್ಮ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ಈ ಹಿಂದೆ ತನಿಖಾ ಸಂಸ್ಥೆಗಳಿಗೆ ನ್ಯಾಯಾಲಯ ಛಿಮಾರಿ ಹಾಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು, ಮುಂದೇನು?
ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲವೆಂಬ ಸಿಎಂ ಹೇಳಿದ್ದಾರೆ. ಒಂದೊಂದು ಸಮಯದಲ್ಲಿ ಸಿದ್ದರಾಮಯ್ಯ ಒಂದೊಂದು ರೀತಿ ವರ್ತಿಸಿದ್ದಾರೆ. ಬೇರೆಯವರ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದಿದರು. ಆದರೆ ತಮ್ಮ ವಿರುದ್ದ ದೂರು ದಾಖಲಾದಾಗ ಉಲ್ಟಾ ಹೊಡೆಯುತ್ತಿದ್ದಾರೆ. ಸಿದ್ದರಾಮಯ್ಯ ನೈತಿಕ ಬೆಲೆ ಹೊತ್ತು ರಾಜೀನಾಮೆ ನೀಡಲಿ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:56 pm, Fri, 27 September 24