AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನಿವೃತ್ತ ನ್ಯಾ ಸಂತೋಷ್ ಹೆಗ್ಡೆ

ಇಂದು ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಏರ್ಪಡಿಸಿದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಶೈಕ್ಷಣಿಕ ವರ್ಷದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ನಗರ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು.

ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನಿವೃತ್ತ ನ್ಯಾ ಸಂತೋಷ್ ಹೆಗ್ಡೆ
ಮಾಧ್ಯಮದಿಂದ ಸಮಾಜ ಬದಲಾವಣೆ ಸುಲಭ ಸಾಧ್ಯ: ನಿವೃತ್ತ ನ್ಯಾ ಸಂತೋಷ್ ಹೆಗ್ಡೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 23, 2024 | 8:46 PM

Share

ಬೆಂಗಳೂರು, ಆಗಸ್ಟ್​ 23: ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿರುವ ಮಾಧ್ಯಮದಿಂದ ಕಾನೂನು ಚೌಕಟ್ಟಿನಲ್ಲಿ ಸಮಾಜ ಬದಲಾವಣೆ ಸುಲಭ ಸಾಧ್ಯ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (Santosh Hegde) ಹೇಳಿದರು. ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮವು ದೇಶಕ್ಕೆಂದೂ ಅಭಿವೃದ್ಧಿಪೂರಕವಾಗಿ ಕಾರ್ಯನಿರ್ವಹಿಸಬೇಕಾಗಿರುವುದರಿಂದ ಉತ್ತಮ ಸಂದೇಶವನ್ನು ಸಮಾಜವು ನಿರೀಕ್ಷಿಸುತ್ತದೆ. ಆ ನಿಟ್ಟಿನಲ್ಲಿ ಉತ್ತಮ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಧ್ಯಮದಿಂದ ಆಗಬೇಕು ಎಂದೂ ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಆಯೇಷಾ ಖಾನಂ, ಮಾಧ್ಯಮಗಳು ಪ್ರಜಾಪ್ರಭುತ್ವದ ಕನ್ನಡಿಯಾಗಿದ್ದು, ಪತ್ರಕರ್ತರು ಪೂರ್ವಾಗ್ರಹಪೀಡಿತರಾಗಿ ಕಾರ್ಯನಿರ್ವಹಿಸ ಕೂಡದು ಎಂದರು.

ಇದನ್ನೂ ಓದಿ: ದಾವಣಗೆರೆ ಸಮ್ಮೇಳನ ಯಶಸ್ವಿಗೆ ಸಾಂಘಿಕ ಪ್ರಯತ್ನ ಕಾರಣ: ಸರ್ವರಿಗೂ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಆಶಯ ಭಾಷಣ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಮಸ್ಯೆ ಮತ್ತು ಸವಾಲುಗಳು ಸಂಘಟನೆಗಳಲ್ಲಿ ಸಾಮಾನ್ಯವಾಗಿದ್ದು ಅವುಗಳನ್ನು ಮೆಟ್ಟಿ ನಿಲ್ಲಬೇಕಾದುದು ಅತ್ಯಗತ್ಯ. ಬೆಂಗಳೂರು ಜಿಲ್ಲಾ ಘಟಕವು ಈ ನಿಟ್ಟಿನಲ್ಲಿ ಸಕ್ರಿಯವಾಗಲು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಮಾಧ್ಯಮಗಳು ನಕಾರಾತ್ಮಕ ವಿಷಯಗಳ ಬಗ್ಗೆ ಗಮನಹರಿಸಬೇಕಾದುದ್ದು ಅನಿವಾರ್ಯವಾಗಿದ್ದು, ಸಮುದಾಯಕ್ಕೆ ಸದಾ ಉತ್ತಮ ಸಂದೇಶ ನೀಡಬೇಕು ಎಂದಿದ್ದಾರೆ.

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸೋಮಶೇಖರ ಗಾಂಧಿ, ಬೆಂಗಳೂರು ನಗರ ಜಿಲ್ಲಾ ಘಟಕವು ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸುವ ಆಶಯವನ್ನೊಂದಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಯಾವುದೇ ಸಂಘವು ಸದಾ ಕ್ರಿಯಾಶೀಲವಾಗುವುದರಲ್ಲಿ ಸದಸ್ಯರ ಪಾತ್ರ ಬಹುಮುಖ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಯೂ.ಡಬ್ಲ್ಯೂ.ಜೆ. ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಸೋಮಶೇಖರ ರೆಡ್ಡಿ, ಚಂದ್ರಕಾಂತ್ ವಡ್ಡು ಹಾಗೂ ಈಶ್ವರ್ ಅವರನ್ನು ಸನ್ಮಾನಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚಿನ ಅಂಕ ಪಡೆದ ನಗರ ಘಟಕದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಾಯಿತು.

ಪತ್ರಕರ್ತರ ಸಂಘದ ಚಾಮರಾಜ ನಗರ ಜಿಲ್ಲಾಧ್ಯಕ್ಷ ದೇವರಾಜು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಟಿ.ಎನ್.ಮೊದಲಿಯಾರ್, ಧಾರವಾಡ ಜಿಲ್ಲಾಧ್ಯಕ್ಷ ಲೋಚನೇಶ್ ಹೂಗಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ರಮೇಶ್, ದಾವಣಗೆರೆ ಜಿಲ್ಲಾ ರಾಷ್ಟೀಯ ಕಾರ್ಯಕಾರಿಣಿ ಸದಸ್ಯ ಒಡೆಯರ್, ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಭುಲಿಂಗಯ್ಯ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ದೇವರಾಜ್, ಬೆಂಗಳೂರು ನಗರ ಘಟಕದ ಪದಾಧಿಕಾರಿಗಳಾದ ಕೆ.ಎಂ. ಜಕ್ರಿಯಾ, ಎನ್. ಶ್ರೀನಾಥ್, ಆರ್ ಜೈಕುಮಾರ್, ಆರ್ ರುದ್ರಸ್ವಾಮಿ, ಎಸ್.ಡಿ. ಚಿಕ್ಕಣ್ಣ, ಪರಿಮಳ, ಬಸವರಾಜ್, ಸಮಿತಿ ಸದಸ್ಯರಾದ ಶಿವರಾಜ್, ಡಿ.ಎಲ್‌. ಹರೀಶ್, ಕೆ.ಎಲ್. ಲೋಕೇಶ್, ಮೋಹನ್, ಕೃಷ್ಣೇಗೌಡ, ಗೋದಾವರಿ, ವಿಜಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:37 pm, Fri, 23 August 24

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ