ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು, ಏನದು ಪ್ರಕರಣ?

| Updated By: ರಮೇಶ್ ಬಿ. ಜವಳಗೇರಾ

Updated on: Dec 04, 2023 | 2:19 PM

ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ಕೆ ದೂರು ದಾಖಲಾಗಿದೆ. ಚುನಾವಣಾ ಅಫಿಡೇವಿಟ್​​ನಲ್ಲಿ ತಪ್ಪು ಮಾಹಿತಿ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು, ಏನದು ಪ್ರಕರಣ?
ಹೆಚ್​ಡಿ ಕುಮಾರಸ್ವಾಮಿ
Follow us on

ಬೆಂಗಳೂರು, (ಡಿಸೆಂಬರ್ 04): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಲೋಕಾಯುಕ್ತಕ್ಕೆ (lokayukta) ದೂರು ನೀಡಲಾಗಿದೆ. ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಪೂರ್ಣ ಮಾಹಿತಿ ನೀಡದ ಆರೋಪ ಮೇಲೆ ಸಾಮಾಜಿಕ ಹೋರಾಟಗಾರ ಸಿ.ಎಸ್​​.ಸಿದ್ದರಾಜು ಎನ್ನುವರು ದೂರು ನೀಡಿದ್ದಾರೆ. 2004 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1,2,3,4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ . ಹಾಗೆ ತನ್ನ ಚಿಕ್ಕಮ್ಮ ಸಾವಿತ್ರಮ್ಮರಿಂದ ದಾನ ಪಡೆದಿರುವುದಾಗಿಯೂ ಹೇಳಿದ್ದಾರೆ. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಎಂದು ಪ್ರಶ್ನಿಸಿದ್ದಾರೆ.

2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಇನ್ನು ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ. ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ಪೂರ್ಣ ಪ್ರಮಾಣದ ಮಾಹಿತಿಯನ್ನ ನೀಡದೇ ವಂಚಿಸಿದ್ದಾರೆ ಎಂದು ಸಿ.ಎಸ್ ಸಿದ್ಧರಾಜು ಅವರು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ