Suicide ರಾಯಲ್ ಎನ್‌ಫೀಲ್ಡ್ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್
ಮೈಸೂರಿನ ಕುವೆಂಪುನಗರದ ಮನೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೋಲಾರ: ನೇಣು ಬಿಗಿದುಕೊಂಡು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಕೋಲಾರಮ್ಮ ಬಡಾವಣೆಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಳೆದ ರಾತ್ರಿ ಮನೆಯಲ್ಲೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೋಲಾರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಮೈಸೂರಿನ ಕುವೆಂಪುನಗರದ ಮನೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ನೇಣಿಗೆ ಶರಣಾಗಿದ್ದಾರೆ. ಅಜಯ್(25) ಆತ್ಮಹತ್ಯೆ ಮಾಡಿಕೊಂಡ ಯುವಕ.
ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಯ್, ಕಳೆದ ಕೆಲ ತಿಂಗಳುಗಳಿಂದ ವರ್ಕ್ ಫ್ರಂ ಹೋಂ ಎಂದು ಮೈಸೂರಿಗೆ ಬಂದಿದ್ದ. ಈ ವೇಳೆ ನನಗೆ ರಾಯಲ್ ಎನ್‌ಫೀಲ್ಡ್ ಬೈಕ್ ಖರೀದಿಸಬೇಕು ಎಂದು ತಾಯಿ, ತಂದೆ ಬಳಿ ಪ್ರಸ್ತಾಪಿಸಿದ್ದ. ಆದರೆ, ಪೋಷಕರು ಸದ್ಯಕ್ಕೆ ಬೇಡ, ಸ್ವಲ್ಪ ದಿನ ಹೋಗಲಿ ಎಂದು ಹೇಳಿದ್ದರು. ಬೈಕ್ ಕೊಡಿಸದ ವಿಚಾರಕ್ಕೆ ಮನನೊಂದು ಅಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಾತ್ರಿ ಊಟ ಮುಗಿಸಿ ತಾಯಿ-ತಂದೆ ಹೊರಗೆ ವಾಕಿಂಗ್ ಹೋಗಿದ್ದಾಗ ಕುವೆಂಪುನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕಲಾಸಿಪಾಳ್ಯದಲ್ಲಿ ಮೂತ್ರ ವಿಸರ್ಜನೆ ವೇಳೆ ವಿದ್ಯುತ್ ತಂತಿ ಸ್ಪರ್ಶ, ಇಬ್ಬರು ಯುವ ಕಾರ್ಮಿಕರ ದುರ್ಮರಣ