ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ. ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ […]

ಕೊರೊನಾ ಲಸಿಕೆ ಹಂಚಿಕೆಗೆ ಸಿದ್ಧವಾಗ್ತಿದೆ ಹೊಸ ಸಾಫ್ಟ್‌ವೇರ್, ಏನಿದರ ವಿಶೇಷತೆ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 21, 2020 | 4:27 PM

ಬೆಂಗಳೂರು: ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಒದಗಿಸಲಿರುವ ಕೊರೊನಾ ಲಸಿಕೆಗಳನ್ನು ರಾಜ್ಯದ ಕೇಂದ್ರ ಸ್ಥಾನದಿಂದ ಜಿಲ್ಲಾ ಕೇಂದ್ರಗಳಿಗೆ ಸುಗಮವಾಗಿ ತಲುಪಿಸಲು ನೆರವಾಗುವ ಸಾಫ್ಟ್​ವೇರ್​ ಮತ್ತು ವೆಬ್​ ಪೋರ್ಟ​ಲ್​ಗಳನ್ನು ಆರೋಗ್ಯ ಇಲಾಖೆ ಸಿದ್ಧಪಡಿಸುತ್ತಿದೆ.

ಲಸಿಕೆ ಹಂಚಿಕೆ ವಿಚಾರದಲ್ಲಿ ಯಾವುದೇ ಲೋಪಗಳು ಆಗಬಾರದು ಎಂದು ಕೇಂದ್ರ ಆರೋಗ್ಯ ಇಲಾಖೆ ಎಚ್ಚರ ವಹಿಸಿದೆ. ಜಿಲ್ಲಾವಾರು ಮಾಹಿತಿಯ ಮೇಲೆಯೂ ನಿಗಾ ಇರಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ವ್ಯಾಕ್ಸಿನ್ ಇಂಟಲಿಜೆನ್ಸ್ ನೆಟ್ವರ್ಕ್ ಹೆಸರಿನ ವೆಬ್​ ಪೋರ್ಟಲ್​ ಸಿದ್ಧವಾಗುತ್ತಿದೆ. ಲಸಿಕೆ ಪಡೆದವರ ವಿವರಗಳೂ ಸೇರಿದಂತೆ ಲಸಿಕೆ ಹಂಚಿಕೆಯ ಮಾಹಿತಿಯನ್ನು ಈ ಪೋರ್ಟಲ್​ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿಯಮಿತವಾಗಿ ಅಪ್​ಡೇಟ್​ ಮಾಡಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರವೇ ಈ ಪೋರ್ಟಲ್​ಗೆ ಲಾಗಿನ್ ಆಗಲು ಪಾಸ್​ವರ್ಡ್​ ಒದಗಿಸಲಾಗುತ್ತದೆ. ಲಸಿಕೆಗಳಿಗೆ ಸಲ್ಲಿಕೆಯಾದ ಬೇಡಿಕೆಯನ್ನು ಪರಿಶೀಲಿಸಿ, ಪೂರೈಕೆಗೆ ರಾಜ್ಯ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಪೋರ್ಟಲ್ ಮತ್ತು ಸಾಫ್ಟ್​ವೇರ್​ನ ವಿವಿಧ ಹಂತಗಳಲ್ಲಿ ಆರೋಗ್ಯ ಇಲಾಖೆ ಪರಿಶೀಲಿಸುತ್ತಿದೆ. ಮುಂದಿನ ವಾರದಿಂದ ಅಧಿಕೃತವಾಗಿ ಕೊವಿಡ್ ವ್ಯಾಕ್ಸಿನ್ ಇಂಟೆಲಿಜೆನ್ಸ್ ನೆಟ್​ವರ್ಕ್​ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ