ಬಾಗಲಕೋಟೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ; ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಬಾಗಲಕೋಟೆಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಇಟ್ಟಿಗೆ ಬಟ್ಟಿಗಳಿಗಾಗಿ ಎಗ್ಗಿಲ್ಲದೆ ಮಣ್ಣು ಸಾಗಾಣಿಕೆ ನಡೆಸಲಾದ ಘಟನೆ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ನಡೆಯುತ್ತಿದೆ.

ಬಾಗಲಕೋಟೆಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ; ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ
ಬಾಗಲಕೋಟೆಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ
Follow us
shruti hegde
|

Updated on: Mar 18, 2021 | 1:29 PM

ಬಾಗಲಕೋಟೆ: ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ. ಇಟ್ಟಿಗೆ ಬಟ್ಟಿಗಳಿಗಾಗಿ ಎಗ್ಗಿಲ್ಲದೆ ಮಣ್ಣು ಸಾಗಾಣಿಕೆ ನಡೆಸಲಾದ ಘಟನೆ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದಲ್ಲಿ ನಡೆಯುತ್ತಿದೆ. ಮಣ್ಣು ಸಾಗಾಣಿಕೆ ವೇಳೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್ ಬಡಿದು ಗಾಯವಾಗಿದೆ. ಈ ಕುರಿತಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣು ಸಾಗಾಣಿಕೆ ಚಟುವಟಿಕೆ ನಡೆಯುತ್ತಿದೆ. ಪ್ರತಿ ನಿತ್ಯ ನೂರಾರು ಟ್ರ್ಯಾಕ್ಟರ್​ಗಳು ಓಡಾಟ ನಡೆಸುತ್ತವೆ. ಅದೇ ದಾರಿಯಲ್ಲಿ ಶಾಲಾ ವಿದ್ಯಾರ್ಥಿಗಳು ನಡೆದು ಸಾಗಬೇಕು. ಈ ವೇಳೆ ಶಾಲೆಗೆ ಹೊರಟ ರಾಧಿಕಾ ಮುತ್ತಣ್ಣ ಪಾಟೀಲ್(15) ಒಂಬತ್ತನೇ ತರಗತಿಯ ವಿದ್ಯಾರ್ಥಿನಿಗೆ ಟ್ರ್ಯಾಕ್ಟರ್​ ಬಡಿದು ಕೈಗೆ ಗಾಯವಾಗಿದೆ. ವಿದ್ಯಾರ್ಥಿನಿಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಣಿ ಸಚಿವ ಮುರುಗೇಶ್ ನಿರಾಣಿ ಜಿಲ್ಲೆಯಲ್ಲೇ ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಈ ಕುರಿತಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಅಕ್ರಮ ಮಣ್ಣು ಸಾಗಾಣಿಕೆಯ ಬಗ್ಗೆ ಪೊಲೀಸರಿಗೆ ಮೇಲಿಂದ ಮೇಲೆ ಮಾಹಿತಿ ನೀಡಿದರು ಕೂಡಾ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

Bagalkot Soil transport

ಅಕ್ರಮ ಮಣ್ಣು ಗಣಿಕಾರಿಕೆ

ಇದನ್ನೂ ಓದಿ: ಅಕ್ರಮ ಮಣ್ಣು ಗಣಿಗಾರಿಕೆ; ಜಮೀನುಗಳಲ್ಲಿ ಬಲಿಗಾಗಿ ಕಾಯುತ್ತಿವೆ ಬೃಹತ್ ಹೊಂಡಗಳು: ಗಣಿ ಇಲಾಖೆಗೆ ಜಾಣ ಕುರುಡು

ಇದನ್ನೂ ಓದಿ: ಅಕ್ರಮವಾಗಿ ಮಣ್ಣು ಲೋಟಿಯಾದ್ರು ಕ್ಯಾರೆ ಅನ್ನದೆ ಕೈ ಕಟ್ಟಿ ಕುಳಿತ ಅಧಿಕಾರಿಗಳು

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ