ಹಾಸನ: ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಯೋಧ ಜಿಲ್ಲೆಯ ಅರಕಲಗೂಡು ತಾಲೂಕಿನ ಬಾಣದಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.
ಮೂರು ವರ್ಷದ ಹಿಂದೆ ಭಾರತೀಯ ಸೇನೆಗೆ ಸೇರಿದ್ದ ಬಿ.ಆರ್.ರಾಕೇಶ್ (23) ಎರಡು ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಎರಡು ದಿನಗಳ ಹಿಂದೆ ದಿಢೀರ್ ಅಸ್ವಸ್ಥನಾಗಿ ಛತ್ತೀಸ್ಗಢದ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ (ಫೆಬ್ರವರಿ 6) ಮಧ್ಯಾಹ್ನ ಯೋಧ ಮೃತಪಟ್ಟಿದ್ದಾರೆ. ಪುತ್ರನ ಸಾವಿನಿಂದ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಯೋಧನ ಮೃತದೇಹ ತವರಿಗೆ ಆಗಮಿಸುವ ನಿರೀಕ್ಷೆಯಿದೆ.
Published On - 11:51 am, Sun, 7 February 21