Kannada News » Karnataka » ವಿ. ನಿಲ್ದಾಣದಲ್ಲಿ ಯೋಧ ರಾಹುಲ್ಗೆ ಗೌರವ ವಂದನೆ, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ವಿ. ನಿಲ್ದಾಣದಲ್ಲಿ ಯೋಧ ರಾಹುಲ್ಗೆ ಗೌರವ ವಂದನೆ, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
sadhu srinath |
Updated on: Nov 09, 2019 | 5:18 PM
ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಬೆಳಗಾವಿ ಮೂಲದ ವೀರ ಯೋಧ ರಾಹುಲ್ ಭೈರು ಸುಳಗೇಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಯಿತು. 22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ. ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧನಿಗೆ ಜಿಲ್ಲಾಡಳಿತ ಸೇರಿದಂತೆ ಅನೇಕ ಜನ ಗೌರವ ವಂದನೆ ಸಲ್ಲಿಸಿದರು. ಬಳಿಕ, ಅಂತಿಮ ಸಂಸ್ಕಾರಕ್ಕಾಗಿ ಯೋಧನ […]
ಬೆಳಗಾವಿ: ಜಮ್ಮುವಿನಲ್ಲಿ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಬೆಳಗಾವಿ ಮೂಲದ ವೀರ ಯೋಧ ರಾಹುಲ್ ಭೈರು ಸುಳಗೇಕರ್ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ತರಲಾಯಿತು. 22 ವರ್ಷದ ರಾಹುಲ್ ಸುಳಗೇಕರ್ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ವೀರ ಯೋಧ.
ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ:
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹುತಾತ್ಮ ಯೋಧನಿಗೆ ಜಿಲ್ಲಾಡಳಿತ ಸೇರಿದಂತೆ ಅನೇಕ ಜನ ಗೌರವ ವಂದನೆ ಸಲ್ಲಿಸಿದರು. ಬಳಿಕ, ಅಂತಿಮ ಸಂಸ್ಕಾರಕ್ಕಾಗಿ ಯೋಧನ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಯೋಧನ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.