AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಹೀಂ ಖಾನ್ ಖಾತೆಯಲ್ಲಿ ಕೊಂಚ ಬದಲಾವಣೆ

ದಶಕಗಳಿಂದ ರಾಜಧಾನಿಯನ್ನ ಆಳುತ್ತಿದ್ದ ಬಿಬಿಎಂಪಿಯ ಆಡಳಿತ ಯುಗಾಂತ್ಯವಾಗಿದ್ದು, ಇದರ ಸ್ಥಾನಕ್ಕೆ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ಬಂದಿದೆ. ಬರೋಬ್ಬರಿ 7 ವರ್ಷಗಳ ಕಾಲ ಜನಪ್ರತಿನಿಧಿಗಳಲಿಲ್ಲದೇ ಅಧಿಕಾರಿಗಳ ಕೈಯಲ್ಲಿದ್ದ ಪಾಲಿಕೆಗೆ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಥಾರಿಟಿಯ ಮೂಲಕ ಹೊಸ ಆಡಳಿತಕ್ಕೆ ಟಚ್ ಕೊಟ್ಟಿದೆ. ಇದರ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ರಹೀಂ ಖಾನ್ ಖಾತೆ ಹೆಸರೂ ಸಹ ಬದಲಾವಣೆಯಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಹೀಂ ಖಾನ್ ಖಾತೆಯಲ್ಲಿ ಕೊಂಚ ಬದಲಾವಣೆ
Dk Shivakumar And Rahim Khan
ಪ್ರಸನ್ನ ಗಾಂವ್ಕರ್​
| Edited By: |

Updated on: Sep 26, 2025 | 6:14 PM

Share

ಬೆಂಗಳೂರು, (ಸೆಪ್ಟೆಂಬರ್ 26): ಬಿಬಿಎಂಪಿ (BBMP) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ (Greater Bengaluru Authority ) ಅಸ್ತಿತ್ವಕ್ಕೆ ಬಂದಿದ್ದು, ಗ್ರೇಟರ್ ಬೆಂಗಳೂರು ಅಥಾರಿಟಿ ಅಡಿ ಐದು ಹೊಸ ಪಾಲಿಕೆಗಳನ್ನು ಮಾಡಲಾಗಿದೆ.  ಇದರ ಬೆನ್ನಲ್ಲೇ ಇದೀಗ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್‌ (Rahim Khan) ಅವರ ಖಾತೆಯಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  (thawar chand gehlot)  ಅಧಿಸೂಚನೆ ಹೊರಡಿಸಿದ್ದಾರೆ.

ಈ ಮೊದಲು ಡಿ.ಕೆ.ಶಿವಕುಮಾರ್‌ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಸಿಎಲ್ (ನಗರ ಯೋಜನೆಗೆ ಸಂಬಂಧಿಸಿದ ಪ್ರಾಧಿಕಾರಗಳು) ಸೇರಿ ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು. ಇದೀಗ ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ (ಬೆಂಗಳೂರು ನಗರ ಯೋಜನೆಗೆ ಸಂಬಂಧಿಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ 5 ಪಾಲಿಕೆಗಳು ಮತ್ತು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು (ಸೇವಾ ವಿಷಯಗಳನ್ನು ಹೊರತುಪಡಿಸಿ), ಬಿಡಿಎ, ಬಿಡಬ್ಲ್ಯುಎಸ್ಎಸ್‌ಬಿ, ಬಿಎಂಆರ್‌ಡಿಎ, ಬಿಎಂಆರ್‌ಎಲ್ ಆಡಳಿತ ಹೊಣೆ ನೀಡಲಾಗಿದೆ.

ಇದನ್ನೂ ಓದಿ: ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ

ಇನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರ ಖಾತೆ ಹಾಗೆಯೇ ಉಳಿದಿದ್ದರೂ‌, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಜವಾಬ್ದಾರಿ ಮಾತ್ರ ಡಿ.ಕೆ.ಶಿವಕುಮಾರ್‌ ಅವರಿಗೆ ನೀಡಲಾಗಿದೆ.

ಮುಖ್ಯಮಂತ್ರಿಯವರ ಸಲಹೆಯ ಮೇರೆಗೆ ಇಬ್ಬರು ಸಚಿವರಿಗೆ ಸಂಬಂಧಿಸಿದಂತೆ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ವ್ಯವಹಾರದಲ್ಲಿ ಅಸ್ತಿತ್ವದಲ್ಲಿರುವ ಖಾತೆಗಳನ್ನು ಮಾರ್ಪಡಿಸಲಾಗಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?