Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆಯಲ್ಲಿ ಬದಲಾವಣೆ, ಏನದು?

|

Updated on: Jun 09, 2023 | 2:08 PM

ಮನೆ ಯಾಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮೀಯ ಅರ್ಜಿ ನಮೂನೆಯನ್ನು ರಾಜ್ಯ ಸರ್ಕಾರ ನಿನ್ನೆ(ಜೂನ್ 08) ಅಷ್ಟೇ ಬಿಡುಗಡೆ ಮಾಡಿದೆ. ಆದ್ರೆ, ಇದೀಗ ಮತ್ತೆ ಅರ್ಜಿಯಲ್ಲಿ ಕೆಲ ಕಾಲಂಗಳನ್ನು ಬದಲಾವಣೆ ಮಾಡಲು ಮುಂದಾಗಿದೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆಯಲ್ಲಿ ಬದಲಾವಣೆ, ಏನದು?
ಗೃಹಲಕ್ಷ್ಮಿ ಯೋಜನೆ,
Follow us on

ಬೆಂಗಳೂರು: ಕಾಂಗ್ರೆಸ್​ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ (Gruha Lakshmi Scheme) ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಿದೆ. ಇದರ ಬೆನ್ನಲ್ಲೇ ಅರ್ಜಿ ನಮೂನೆಯನ್ನೂ ಸಹ ಬಿಡುಗಡೆ ಮಾಡಿದೆ. ಆದ್ರೆ, ಅರ್ಜಿಯಲ್ಲಿ ಜಾತಿ ನಮೂದು ಮಾಡಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿವೆ. ಎಲ್ಲಾ ಓಕೆ ಆದರೆ ಈ ಅರ್ಜಿಯಲ್ಲಿ ಜಾತಿ ಕಾಲಂ ಯಾಕೆ? ಎಂದು ಪ್ರಶ್ನಿಸಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ, ಗೃಹಲಕ್ಷ್ಮೀ ಯೋಜನೆ ಅರ್ಜಿಯಲ್ಲಿ ಕೆಲ ಬದಲಾವಣೆ ಮಾಡಲು ಮುಂದಾಗಿದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar)​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿಯಲ್ಲೇನಿದೆ?

ಇಂದು(ಜೂನ್ 09) ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಗೃಹಲಕ್ಷ್ಮೀ’ ಅರ್ಜಿ ಅಸಲಿಯಾಗಿದೆ. ಆದ್ರೆ, ಗೃಹಲಕ್ಷ್ಮೀ ಯೋಜನೆ ಅರ್ಜಿಯಲ್ಲಿ ಕೆಲ ಬದಲಾವಣೆ ಮಾಡಲಿದ್ದೇವೆ. ‘ಗೃಹಲಕ್ಷ್ಮೀ’ ಅರ್ಜಿಯಲ್ಲಿ ಜಾತಿ ಬದಲು ವರ್ಗ ಎಂದು ಹಾಕುತ್ತೇವೆ. ಬ್ಯಾಂಕ್ ಪಾಸ್ ಬುಕ್​ ಸಹ ಸೇರಿಸಲಾಗುವುದು ಎಂದು ಹೇಳಿದರು.

ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗಲಿದೆ. ಆಗಸ್ಟ್ 17 ಅಥವಾ 18ರಂದು ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಪತಿ ತೆರಿಗೆ ಕಟ್ಟಿದರೆ ಪತ್ನಿಗೆ ಯೋಜನೆಯ 2 ಸಾವಿರ ರೂ. ಸಿಗುವುದಿಲ್ಲ. ಮನೆ ಯಜಮಾನಿಯ ಮಗ ತೆರಿಗೆ ಕಟ್ಟುವವರೆಗೂ ಈ ಯೋಜನೆ ಅನ್ವಯ ಆಗಲ್ಲ. 90% ಬಿಪಿಎಲ್ ಕಾರ್ಡಗಳಲ್ಲಿ ಮಹಿಳೆಯರೇ ಪ್ರಮುಖ ಅಗಲಿದ್ದಾರೆ. ಯಾರಿಗೆಲ್ಲಾ ಫಲ ಸಿಗಬೇಕು ಅವರನ್ನ ಸೇರಿಸಲಾಗುತ್ತೆ. ಈಗ ಬಂದಿರುವ ಅರ್ಜಿ ಡ್ರಾಫ್ಟ್ ಮಾತ್ರ ಎಂದು ಸ್ಪಷ್ಟಪಡಿಸಿದರು.