ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯ ಆಗಮನವಾಗಿದೆ. ಅದು ಕೂಡ ಆಲಿಕಲ್ಲು ಮಳೆ ಬಿದ್ದಿದ್ದು, ಬಿಸಿಲಿನಿಂದ ಬಳಲಿದ್ದ ನಗರವು ತಂಪಾಗಿದೆ. ಇನ್ನು ರಾಜಧಾನಿಯಲ್ಲಿ ಮುಂದಿನ ನಾಲ್ಕು ದಿನ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು (ಮಾರ್ಚ್ 18) ಸಹ ಬೆಂಗಳೂರಿನಲ್ಲಿ ವರುಣನ ಅರ್ಭಟ ಜೋರಾಗಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರದಲ್ಲೂ ಆಲಿಕಲ್ಲು ಮಳೆಯಾಗುತ್ತಿದೆ. ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳನ್ನು ಬೇರೆ ನಿಲ್ದಾಣಗಳಿಗೆ ಡೈವರ್ಟ್ ಮಾಡಲಾಗಿದೆ.

ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್
ಪ್ರಾತಿನಿಧಿಕ ಚಿತ್ರ
Edited By:

Updated on: Mar 18, 2026 | 10:29 PM

ಬೆಂಗಳೂರು, (ಮಾರ್ಚ್ 18): ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಿನ್ನೆ (ಮಾರ್ಚ್ 17) ವರ್ಷದ ಮಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸುತ್ತಮುತ್ತ ಭಾರೀ ಆಲಿಕಲ್ಲು ಮಳೆಯಾಗುತ್ತಿದೆ. ಇದರಿಂದ ಮಳೆ ನೀರು ನುಗ್ಗಿ ಬಸ್ ನಿಲ್ಥಾಣ ಸೇರಿದಂತೆ ಹೆದ್ದಾರಿಯಲ್ಲಿ ಜನರ ಪರದಾಡುತ್ತಿದ್ದಾರೆ. ಇನ್ನು ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport) ಆಗಮಿಸಬೇಕಿದ್ದ  20ಕ್ಕೂ ಅಧಿಕ ವಿಮಾನಗಳು ಡೈವರ್ಟ್ ವಿಮಾನಗಳನ್ನು ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿಗೆ ಡೈವರ್ಟ್ ಮಾಡಲಾಗಿದೆ.

ಬೆಂಗಳೂರಿಗೆ ಬರುತ್ತಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್​​

ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದರಿಂದ ಮುಂಜಾಗ್ರತಾವಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 20 ಕ್ಕೂ ಅಧಿಕ ವಿಮಾನಗಳನ್ನು ಬೇರೆ ಕಡೆ ಡೈವರ್ಟ್ ಮಾಡಲಾಗಿದೆ. ಬೇರೆ ಕಡೆಗಳಿಂದ ಬರುತ್ತಿದ್ದ ವಿಮಾನಗಳನ್ನು ಪಕ್ಕದ ಚೆನ್ನೈ, ಹೈದರಾಬಾದ್, ಮಂಗಳೂರು, ಗುವಾಹಟಿ, ಪುಕೆಟ್,ಪಾಟ್ನಾ, ಲಕ್ನೋ, ಚಂಡಿಗಡ್, ಶ್ರೀ‌ನಗರ, ದೆಹಲಿ, ಇಂಪಾಲ್, ಕೊಚ್ಚಿಗೆ ಡೈವರ್ಟ್ ಮಾಡಲಾಗಿದೆ.

ಇದನ್ನೂ ನೋಡಿ: ನೆಲಮಂಗಳದಲ್ಲಿ ಭಾರೀ ಮಳೆ ಗಾಳಿಗೆ ಧರೆಗುರುಳಿದ ಬೃಹತ್ ನೇಮ್ ಬೋರ್ಡ್ ಪಿಲ್ಲರ್

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನಗಳು ಚೆನ್ನೈಗೆ

ಇನ್ನು ರಾಷ್ಟ್ರರಾಜಧಾನಿ ನವದೆಹಲಿಯಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಬುಧವಾರ ಸಂಜೆ 5ರ ಮೇಲೆ ದೆಹಲಿಯಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು ಹದಿನೈದು ವಿಮಾನಗಳನ್ನು ಚೆನ್ನೈಗೆ ಡೈವರ್ಟ್ ಮಾಡಲಾಗಿದೆ.

ಇನ್ನು ಮಳೆಯಿಂದಾಗಿ ಲ್ಯಾಂಡಿಂಗ್ ಸಮಸ್ಯೆ ಹಾಗೂ ಏರ್ ಟ್ರಾಪಿಕ್ ನಿಂದ ವಿಮಾನಗಳನ್ನ ಡೈವರ್ಟ್ ಮಾಡಲಾಗಿದೆ. ಇನ್ನು 30ಕ್ಕೂ ಅಧಿಕ ವಿಮಾನಗಳ ಟೇಕ್ ಆಫ್ ಹಾಗೂ ಲ್ಯಾಂಡಿಂಗ್ ಡಿಲೆಯಾಗಿದೆ. ಇದರಿಂದ ಬೆಂಗಳೂರಿಗೆ ಆಗಮಿಸಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us