ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ

ರಾಜ್ಯದಲ್ಲಿ ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಆಯೋಗವು ಸರ್ಕಾರಕ್ಕೆ ಪತ್ರ ಬರೆದಿದ್ದು, ಸೂಕ್ತ ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮಕ್ಕಳ ಕಳ್ಳತನ ಹಾಗೂ ಮಾರಾಟದ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ಸಾಂಕೇತಿಕ ಚಿತ್ರ (Image Credits: Shutterstock)
Follow us
TV9 Web
| Updated By: shivaprasad.hs

Updated on: Oct 12, 2021 | 9:59 AM

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮಾರಾಟ ಮತ್ತು ಕಳ್ಳತನದ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಪತ್ರ ಬರೆದಿದೆ. ಮಕ್ಕಳ ಕಳ್ಳತನ, ಮಾರಾಟದ ಬಗ್ಗೆ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಯೋಗ ಮನವಿ ಮಾಡಿದೆ. ಮಕ್ಕಳ ನಾಪತ್ತೆ ಪ್ರಕರಣಗಳ ಕುರಿತು ಆತಂಕಕಾರಿ ಅಂಕಿಅಂಶಗಳನ್ನೂ ಆಯೋಗ ಇದೇ ವೇಳೆ ಉಲ್ಲೇಖಿಸಿದೆ. 2017ರಿಂದ 2019ರ ಅವಧಿಯಲ್ಲಿ 11,135 ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಪೈಕಿ 10,192 ಮಕ್ಕಳು ಪತ್ತೆಯಾಗಿದ್ದಾರೆ. ಆದರೆ 943 ಮಕ್ಕಳು ಇದುವರೆಗೂ ಪತ್ತೆಯಾಗಿಲ್ಲ ಎಂದು ಆಯೋಗ ಆತಂಕಕಾರಿ ಮಾಹಿತಿ ಹೊರಹಾಕಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಮಕ್ಕಳ ಮಾರಾಟ ಜಾಲ ಪತ್ತೆಯಾಗಿತ್ತು. ಆ ಪ್ರಕರಣದಲ್ಲಿ ಐವರನ್ನು ಬಂಧಿಸಿ, 11 ಮಕ್ಕಳನ್ನು ರಕ್ಷಿಸಲಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಸರ್ಕಾರಕ್ಕೆ ಮನವಿ ಮಾಡಿದೆ. ರಾಜ್ಯದಲ್ಲಿ ಮಕ್ಕಳ ಮಾರಾಟ ಹಾಗೂ ಕಳ್ಳತನ ಶುರುವಾಗಿರುವ ಬಗ್ಗೆ ಆಯೋಗ ಕಳವಳ ವ್ಯಕ್ತಪಡಿಸಿದ್ದು, ಮೈಸೂರು,ಬೆಂಗಳೂರು, ತುಮಕೂರು ಭಾಗದಲ್ಲಿ ಮಕ್ಕಳ ಮಾರಾಟ ಹೆಚ್ಚಾಗಿರುವ ಬಗ್ಗೆ ಮಾಹಿತಿ ನೀಡಿದೆ.

ಬಡವರನ್ನು ಟಾರ್ಗೆಟ್ ಮಾಡಿಕೊಂಡು ಮಕ್ಕಳ ಮಾರಾಟ ನಡೆಸಲಾಗುತ್ತಿದೆ. ಆಸ್ಪತ್ರೆಗಳಿಂದಲೇ‌ ಮಕ್ಕಳ ಕಳ್ಳತನ ಮಾಡುವ ಮಾಫಿಯಾ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರಿ‌ ಆಸ್ಪತ್ರೆಗಳೇ ಮಕ್ಕಳ‌ ಮಾರಾಟದ‌ ಅಡ್ಡೆಯಾಗಿವೆ ಎಂದು ಆಯೋಗ ಆತಂಕಕಾರಿ ಮಾಹಿತಿ ತಿಳಿಸಿದೆ. ಈ ಕುರಿತು ಪೊಲೀಸ್ ಇಲಾಖೆಯಿಂದ ಸೂಕ್ತ ತನಿಖೆಗೆಗೆ ಆಯೋಗದ ಮನವಿ ಮಾಡಿದೆ.

ಇದನ್ನೂ ಓದಿ:

Karnataka Rain: ಕರ್ನಾಟಕದ ಹಲವು ಕಡೆ ಭಾರಿ ಮಳೆ; ಫೋಟೋಗಳು ಇಲ್ಲಿವೆ

Bengaluru Power Cut: ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಪವರ್​ ಕಟ್; ಯಾವ ಯಾವ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ ಗೊತ್ತಾ?​

ಕೃಷಿ ಕುಟುಂಬಗಳಲ್ಲಿ ಪ್ರಾಣಿ ಸಾಕಣೆಯ ಲೆಕ್ಕಾಚಾರವನ್ನು ತೆರೆದಿಡುವ ಆಸಕ್ತಿಕರ ಅಂಕಿ-ಅಂಶಗಳು ಇಲ್ಲಿವೆ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್