ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ

ಸಿಎಂ ಸಿದ್ದರಾಮಯ್ಯ 4 ತಿಂಗಳ ನಂತರ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಕೆದಕಿದ್ದಾರೆ. ಅದೇ ರೀತಿಯಾಗಿ ನನ್ನ ಮುಗಿಸಲು ಸಹ ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ, ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡುತ್ತಿದ್ದಾರೆ, ಮಾಡಲಿ ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ
ನನ್ನ ಮುಗಿಸಲು ಕೆಲ ನಾಯಕರು ಪ್ರಯತ್ನಿಸುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆರೋಪ
Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:Jun 14, 2024 | 6:05 PM

ಬೆಂಗಳೂರು, ಜೂನ್​ 14: ನನ್ನ ಮುಗಿಸಲು ಸಹ ಕೆಲ ನಾಯಕ ಪ್ರಯತ್ನ ಮಾಡುತ್ತಿದ್ದಾರೆ, ಮಾಡಲಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಕೇಂದ್ರ ಸಚಿವರಾಗಿ ವಾರದ ಬಳಿಕ ಇಂದು ಬೆಂಗಳೂರಿಗೆ ಹೆಚ್​ಡಿ ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜೆಡಿಎಸ್​ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದು ಹೇಳಿದ್ದಾರೆ.

ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ ವಿಚಾರವಾಗಿ ಮಾತನಾಡಿದ್ದು, ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಜನರಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಲ್ಕು ತಿಂಗಳ ನಂತರ ಈ ಕೇಸ್ ಕೆದಕಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬೆಂಗಳೂರಿಗೆ ಬಂದ ಕುಮಾರಸ್ವಾಮಿ; ರಾಜ್ಯದ ಜನರಿಗೆ ಕೊಟ್ಟ ಭರವಸೆ ಏನು?

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಗೆ ಶಾಮಿಯಾನ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇತಿಹಾಸದಲ್ಲಿ ಈ ರೀತಿ ಘಟನೆ ಯಾವತ್ತೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.

4 ದಿನ ದೆಹಲಿಯಲ್ಲಿ, ಇನ್ನೆರಡು ದಿನ ಕರ್ನಾಟಕದಲ್ಲಿ ಕೆಲಸ

ಪ್ರಧಾನಿ ಮೋದಿ ಸಂಪುಟದಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಕೇಂದ್ರ ಸಚಿವನಾದ ಬಳಿಕ ನನ್ನ ಕರ್ಮ ಭೂಮಿಗೆ ಬಂದಿದ್ದೇನೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸ್ತೇನೆ. ವಿಶೇಷವಾಗಿ ರಾಮನಗರ, ಮಂಡ್ಯ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನರೇಂದ್ರ ಮೋದಿ ನನಗೆ ಎರಡು ದೊಡ್ಡ ಖಾತೆಗಳನ್ನು ಕೊಟ್ಟಿದ್ದಾರೆ. 4 ದಿನ ದೆಹಲಿಯಲ್ಲಿ ಕೆಲಸ, ಇನ್ನೆರಡು ದಿನ ಕರ್ನಾಟಕದಲ್ಲಿ ಇರುತ್ತೇನೆ. ನಮ್ಮ ಸ್ವಯಂಕೃತ ಅಪರಾಧದಿಂದ 2 ಕ್ಷೇತ್ರಗಳಲ್ಲಿ ಸೋತಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವರಾದ ಬಳಿಕ ಬೆಂಗಳೂರಿಗೆ ಬಂದ ಕುಮಾರಸ್ವಾಮಿಗೆ ಆ್ಯಪಲ್, ಮೂಸಂಬಿ ಹಾರ ಹಾಕಿ ಭರ್ಜರಿ ಸ್ವಾಗತ

ಹಾಸನ ಜಿಲ್ಲೆಯ ಜನತೆಗೆ ನಾನು ಎಂದಿಗೂ ದ್ರೋಹ ಮಾಡಲ್ಲ. ನನ್ನ ಕೊನೆಯುಸಿರು ಇರುವವರೆಗೂ ಹಾಸನ ಜನತೆ ಮರೆಯಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕೇಂದ್ರ ಸಚಿವರಾಗಿ ವಾರದ ಬಳಿಕ ಇಂದು ಬೆಂಗಳೂರಿಗೆ ಹೆಚ್​ಡಿ ಕುಮಾರಸ್ವಾಮಿ ಆಗಮಿಸಿದ್ದಾರೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದಲ್ಲಿ ಬೇರೆ ಬೇರೆ ಇದ್ದೇವೆ ಎಂದು ಟೀಕೆಮಾಡಿದ್ದರು. ನನಗೆ ನೋವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:04 pm, Fri, 14 June 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?