ಮೈಸೂರಿನಲ್ಲೊಂದು ಅಮಾನವೀಯ ಘಟನೆ.. ಕೊರೊನಾ ಸಮಯದಲ್ಲಿ ಮನೆಯವರಿಂದ ಬೀದಿಪಾಲಾದ ಅಜ್ಜಿ

ಕೊರೊನಾ ಸಂಕಷ್ಟದ ಕಾಲದಲ್ಲಿ ಮನೆಯವರೇ ಅಜ್ಜಿಯನ್ನು ಬೀದಿಪಾಲು ಮಾಡಿದ್ದು ಅಜ್ಜಿಯ ಮನವೊಲಿಸಿ ಆಕೆಯನ್ನು ಮನೆಗೆ ವಾಪಸ್ ಕಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳವಾಡಿ ಗ್ರಾಮದಲ್ಲಿ ಕುಟುಂಬವೊಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟು ಹೋಗಿದ್ದಾರೆ.

ಮೈಸೂರಿನಲ್ಲೊಂದು ಅಮಾನವೀಯ ಘಟನೆ.. ಕೊರೊನಾ ಸಮಯದಲ್ಲಿ ಮನೆಯವರಿಂದ ಬೀದಿಪಾಲಾದ ಅಜ್ಜಿ
ಅಜ್ಜಿಯನ್ನು ಮನೆಗೆ ವಾಪಸ್ ಕಳಿಸಿದ ಸ್ನೇಹ ಬಳಗ ಸದಸ್ಯರು
Follow us
ಆಯೇಷಾ ಬಾನು
|

Updated on: May 25, 2021 | 8:17 AM

ಮೈಸೂರು: ಮಹಾಮಾರಿ ಕೊರೊನಾಗೆ ಜನ ಬಲಿಯಾಗುತ್ತಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಇದರ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ.

ಕೊರೊನಾ ಸಂಕಷ್ಟದ ಕಾಲದಲ್ಲಿ ಮನೆಯವರೇ ಅಜ್ಜಿಯನ್ನು ಬೀದಿಪಾಲು ಮಾಡಿದ್ದು ಅಜ್ಜಿಯ ಮನವೊಲಿಸಿ ಆಕೆಯನ್ನು ಮನೆಗೆ ವಾಪಸ್ ಕಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಟ್ಟೆಮಳವಾಡಿ ಗ್ರಾಮದಲ್ಲಿ ಕುಟುಂಬವೊಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟು ಹೋಗಿದ್ದಾರೆ. ಕೊರೊನಾದಂತಹ ಸಂಕಷ್ಟವನ್ನು ಎದುರಿಸಲು ರಾಜ್ಯ ಸರ್ಕಾರವೇ ಲಾಕ್ಡೌನ್ ಹೇರಿದೆ. ಇದರ ನಡುವೆ ಕುಟುಂಬವೊಂದು ಇಂತಹ ದುಷ್ಕೃತ್ಯ ಎಸಗಿದೆ.

ಮನೆಯವರೇ ದ್ವಿಚಕ್ರವಾಹನದಲ್ಲಿ ಬಂದು ಅಜ್ಜಿಯನ್ನು ನಡು ಬೀದಿಯಲ್ಲಿ ಬಿಟ್ಟುಹೋಗಿದ್ದಾರೆ. ಹುಣಸೂರಿನ ಅಗ್ರಹಾರದ ನಿವಾಸಿಯಾಗಿರುವ ಅಜ್ಜಿ, ತನಗೆ ಮಕ್ಕಳು ಕಿರುಕುಳ ಕೊಡುತ್ತಾರೆ. ನಾನು ಮನೆಗೆ ವಾಪಸ್ ಹೋಗಲ್ಲವೆಂದು ಪಟ್ಟುಹಿಡಿದಿದ್ದು ಪೊಲೀಸರ ಸಹಾಯದಿಂದ ಅಜ್ಜಿ ಮನವೊಲಿಸಿ ಸ್ನೇಹಜೀವಿ ಬಳಗದ ಸದಸ್ಯರು ಅಜ್ಜಿಯನ್ನು ಅವರ ಮನೆಗೆ ತಲುಪಿಸಿದ್ದಾರೆ. ಹಾಗೂ ಅಜ್ಜಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಪೊಲೀಸರು ಮಕ್ಕಳಿಗೆ ಬುದ್ದಿ ಹೇಳಿದ್ದಾರೆ. ಪೊಲೀಸರು ಸ್ನೇಹ ಬಳಗ ಸದಸ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಹಂತ-2 ರ ರೀಚ್ – 2 ವಿಸ್ತರಿತ ಮಾರ್ಗದ ಪರಿಶೀಲನೆ ನಡೆಸಲಿರುವ ಸಿಎಂ ಯಡಿಯೂರಪ್ಪ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ