ಹಾಸನ, ಜ.26: ಹೆಂಡತಿಯನ್ನು ತನ್ನೊಟ್ಟಿಗೆ ಕಳಿಸ್ತಿಲ್ಲ ಎಂದು ಕೋಪಗೊಂಡ ಅಳಿಯ, ಮಗಳನ್ನು ಕೊಟ್ಟ ಮಾವನನ್ನೇ ಹತ್ಯೆಗೈದ ಘಟನೆ ಹಾಸನದಲ್ಲಿ (Hassan) ನಡೆದಿದೆ. ಕುಡಿದ ಮತ್ತಿನಲ್ಲಿ ಮಾವನ ಮೇಲೆ ಹಲ್ಲೆ (Assault) ಮಾಡಿ ಕೊಲೆ ಮಾಡಿದ್ದಾನೆ. ಬೇಲೂರು (Belur) ತಾಲೂಕಿನ ರಾಮೇನಹಳ್ಳಿಯ ತಮ್ಮಯ್ಯ (64) ಮೃತ ವ್ಯಕ್ತಿ. ಬಲ್ಲೇನಹಳ್ಳಿ ಗ್ರಾಮದ ಅಳಿಯ ಜಗದೀಶ್ (45) ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.
20 ವರ್ಷಗಳ ಹಿಂದೆ ತಮ್ಮಯ್ಯ ಪುತ್ರಿಯನ್ನು ಜಗದೀಶ್ ಮದುವೆಯಾಗಿದ್ದ. ತಮ್ಮಯ್ಯಗೆ ಗಂಡು ಮಕ್ಕಳಿಲ್ಲದ ಕಾರಣ ತನ್ನನ್ನು ನೋಡಿಕೊಳ್ಳಲೆಂದು ಮಗಳನ್ನು ಮನೆಯಲ್ಲೇ ಇರಿಸಿಕೊಂಡಿದ್ದ. ಮತ್ತೊಂದೆಡೆ ಪತಿ ಜಗದೀಶ್, ತನಗೆ ಮನೆಯ ಜವಾಬ್ದಾರಿ ನೀಡುತ್ತಿಲ್ಲ ಎಂದು ಪತ್ನಿಯನ್ನ ತನ್ನ ಮನೆಗೆ ವಾಪಸ್ ಕಳಿಸುವಂತೆ ಪದೇ ಪದೆ ಜಗಳ ಮಾಡುತ್ತಿದ್ದ. ನಿನ್ನೆ ಮನೆ ಬಳಿಯೇ ಬಂದು ಮಾವನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ತಮ್ಮಯ್ಯನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು ಸಂಭವಿಸಿದೆ. ಸಾರ್ವಜನಿಕರು ಜಗದೀಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಡಿತದ ದಾಸನಾಗಿದ್ದ ಆರೋಪಿ ಪೊಲೀಸರ ವಶದಲ್ಲಿದ್ದಾನೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಉತ್ತರ ಪ್ರದೇಶ: ಜ್ಯುವೆಲರಿ ಮಾಲೀಕನ ಮೇಲೆ ಗುಂಡಿನ ದಾಳಿ, ಚಿನ್ನಾಭರಣ, ಹಣ ತುಂಬಿದ ಬ್ಯಾಗ್ ದೋಚಿ ಪರಾರಿ
ಹೆದ್ದಾರಿಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿಯಲ್ಲಿ ಘಟನೆ ನಡೆದಿದ್ದು, ಕಾರ್ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಮಹೇಶ್ ಎಂಬುವರಿಗೆ ಸೇರಿದ ಕಾರು, ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ನಂಗಲಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚೌಕನಗಾಳಾಯದಲ್ಲಿ ಘಟನೆ ನಡೆದಿದ್ದು, ದಾಂಡೇಲಿ ಪಟ್ಟಣದ ನಿವಾಸಿಗಳಾದ ರಾಕೇಶ್ ಮಹದೇವಪ್ಪ ಬಡಿಗೇರ, ರಿತೇಶ್ ಸುಬ್ರಹ್ಮಣ್ಯ ನಾಯರ್, ಕೃಷ್ಣ ವಣ್ಣುರಾಯ ಮೃತಪಟ್ಟ ದುರ್ದೈವಿಗಳು. ಅತಿವೇಗದ ಚಾಲನೆಯಿಂದ ನಡೆದ ಅಪಘಾತ ಸಂಭವಿಸಿದೆ ಎಂದು ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:07 pm, Fri, 26 January 24