ಸೋನಿಯಾ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ; ಸಂಚಾರ ಮಾರ್ಗದಲ್ಲಿ ಬದಲಾವಣೆ

| Updated By: Rakesh Nayak Manchi

Updated on: Jul 21, 2022 | 8:10 AM

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದ್ದು, ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್​ ವತಿಯಿಂದ ಪ್ರತಿಭಟನೆ ನಡೆಯಲಿದೆ. ಈ ನಿಟ್ಟಿನಲ್ಲಿ ವಾಹನ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದೆ.

ಸೋನಿಯಾ ಗಾಂಧಿ ಇಡಿ ವಿಚಾರಣೆ: ಬೆಂಗಳೂರಿನಲ್ಲಿ ಕಾಂಗ್ರೆಸ್​​ನಿಂದ ಬೃಹತ್ ಪ್ರತಿಭಟನೆ; ಸಂಚಾರ ಮಾರ್ಗದಲ್ಲಿ ಬದಲಾವಣೆ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ (ಸಾಂಕೇತಿಕ ಚಿತ್ರ)
Follow us on

ಬೆಂಗಳೂರು: ಹಣ ವರ್ಗಾವಣೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದ್ದು, ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಹೀಗಾಗಿ ನಗರ ಸಂಚಾರ ಪೊಲೀಸರು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಬಾರದು ಎಂದು ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆಗಳಾಗಳಿವೆ.

ನಗರದಲ್ಲಿ ಬೃಹತ್ ಪ್ರತಿಭಟನೆ ಹಿನ್ನೆಲೆ ಬೆಳಗ್ಗೆ 9 ಗಂಟೆಯಿಂದಲೇ ವಾಹನ ಸಂಚಾರ ಮಾರ್ಗಗಳಲ್ಲಿ ಬದಲಾವಣೆಗಳಾಗಲಿದ್ದು, ಮೆಜೆಸ್ಟಿಕ್​ನಿಂದ ಬರುವ ವಾಹನಗಳು ಮೌರ್ಯ ಸರ್ಕಲ್, ಹಳೇ ಜೆಡಿಎಸ್ ಕಚೇರಿ, ರೇಸ್ ಕೋರ್ಸ್ ರಸ್ತೆ, ಸಿಐಡಿ ಜಂಕ್ಷನ್, ಮಹಾರಾಣಿ ಜಂಕ್ಷನ್, ಕೆ.ಆರ್ ಸರ್ಕಲ್ ಮೂಲಕ ಹೋಗುವಂತೆ ಸಿದ್ದತೆ ನಡೆಸಲಾಗಿದ್ದು, ಎಷ್ಟು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೋ ಅದನ್ನು ನೋಡಿಕೊಂಡು ಸಂಚಾರ ಮಾರ್ಗದಲ್ಲಿ ಬದಲಾವಣೆಗಳು ಆಗಲಿವೆ. ಟ್ರಾಫಿಕ್ ಜಾಮ್ ಆಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ.

ಸಂಚಾರಿ ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ

ಪ್ರತಿಭಟನೆಯಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಸಂಚಾರಿ ಪೊಲೀಸರು ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ವಾಹನ ಸವಾರರಿಗೆ ಅಡಚಣೆ ಉಂಟಾಗದಂತೆ ನೋಡಿಕೊಳ್ಳಲು ಇಬ್ಬರು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ೬೦ ಟ್ರಾಫಿಕ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

ಫ್ರೀಡಂ ಪಾರ್ಕ್ ಸುತ್ತ ಪೊಲೀಸ್ ಸರ್ಪಗಾವಲು

ಎಐಸಿಸಿ ಅಧ್ಯಕ್ಷೆ ಸೊನಿಯಾ ಗಾಂಧಿಗೆ ಇಡಿ ನೋಟಿಸ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ನಗರದ ಫ್ರೀಡಂ ಪಾರ್ಕ್ ಸುತ್ತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಭದ್ರತೆ ನೇತೃತ್ವವನ್ನು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರ್ಗಿ ಅವರಿಗೆ ವಹಿಸಲಾಗಿದ್ದು, 5 ಎಸಿಪಿ, 15 ಇನ್ಸ್​​ಪೆಕ್ಟರ್, 30 ಪಿಎಸ್​ಐ, 600 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಅದಾಗ್ಯೂ ಹೆಚ್ಚುವರಿಯಾಗಿ 5 ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

Published On - 8:10 am, Thu, 21 July 22