ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಗೈರು: ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಎರಡು ದಿನ ಗಾಂಧಿ ಭಾರತ್ ಕಾರ್ಯಕ್ರಮಕ್ಕೆ ದೇಶದ ಕಾಂಗ್ರೆಸ್ ನಾಯಕರ ದಂಡೆ ನಗರಕ್ಕೆ ಆಗಮಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಇಡೀ ಮಂತ್ರಿ ಮಂಡಲ ಮತ್ತು ಕಾಂಗ್ರೆಸ್ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ಬಿಡು ಬಿಟ್ಟಿದ್ದಾರೆ. ಆದ್ರೆ, ಮುಖ್ಯವಾಗಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗೈರು ಎದ್ದು ಕಾಣುತ್ತಿದೆ. ಇನ್ನು ಈ ಬಗ್ಗೆ ಸೋನಿಯಾ ಗಾಂಧಿ, ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದು ಪತ್ರ ಬರೆದಿದ್ದು, ಮಹತ್ವದ ಕರೆಯೊಂದನ್ನು ನೀಡಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಗೈರು: ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ
Sonia Gandhi
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 26, 2024 | 6:31 PM

ಬೆಳಗಾವಿ, (ಡಿಸೆಂಬರ್ 26): ಬೆಳಗಾವಿಯಲ್ಲಿ ಕಾಂಗ್ರೆಸ್​ನದ್ದೆ ಕಲರವ ನಡೆಯತ್ತಿದೆ. 1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಗೈರಾಗಿದ್ದು, ಈ ಸಂಬಂಧ ಪತ್ರ ಬರೆದಿರುವ ಅವರು ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.

ಸೋನಿಯಾ ಗಾಂಧಿ ಪತ್ರದಲ್ಲೇನಿದೆ?

ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗಿರಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. 39ನೇ ಅಧಿವೇಶನ ನಡೆದ ಸ್ಥಳದಲ್ಲೇ ನೀವೆಲ್ಲಾ ಸಮಾವೇಶಗೊಂಡಿರುವುದು ಸೂಕ್ತವಾಗಿದೆ. ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿರುವುದಕ್ಕೆ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ್ಯ ಚಳವಳಿಗೆ ಮಹತ್ವದ ತಿರುವು ನೀಡಿದೆ. ದೆಹಲಿಯಲ್ಲಿ ಅಧಿಕಾರದಲ್ಲಿ ಇರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ. ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ್ಯಕ್ಕಾಗಿ ಎಂದೂ ಹೋರಾಟ ಮಾಡಲಿಲ್ಲ.. ಅಲ್ಲದೇ ಮಹಾತ್ಮ ಗಾಂಧೀಜಿ ಅವರನ್ನ ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನ ಸಂಭ್ರಮಿಸಿದವರು.

ಇದನ್ನೂ ಓದಿ: ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ದೇಶದ ವಿವಿಧೆಡೆ ಗಾಂಧಿ ಸಂಘ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದು, ಇಂದು ನಡೆಯುತ್ತಿರುವ ಸಭೆಯನ್ನ ನವ ಸತ್ಯಾಗ್ರಹ ಬೈಠಕ್ ಎಂದು ಕರೆದಿರುವುದು ಸೂಕ್ತವಾಗಿದೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು(ಡಿಸೆಂಬರ್ 26) ಬೆಳಗಾವಿಯ ವೀರಸೌಧದಲ್ಲಿ ನಡೆದ ಎಐಸಿಸಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಸಭೆಯಲ್ಲಿ ರಾಹುಲ್, ಕೆ.ಸಿ.ವೇಣುಗೋಪಾಲ್​, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಣದೀಪ್​ ಸಿಂಗ್​ ಸುರ್ಜೇವಾಲ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಆದ್ರೆ, CWC ಸಭೆಗೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗೈರು ಎದ್ದು ಕಾಣುತ್ತಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Thu, 26 December 24

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ