ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಆಡಳಿತಾಧಿಕಾರಿ ವಿರುದ್ಧ ಸಚಿವರಿಗೆ ದೂರು
ಶಿವಮೊಗ್ಗ ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿಗಳು ಅಸಭ್ಯ ವರ್ತನೆ ಮತ್ತು ಲೈಂಗಿಕ ಕಿರುಕುಳ ಆರೋಪ ಮಾಡಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಸಚಿವ ಮಧು ಬಂಗಾರಪ್ಪಗೂ ದೂರು ನೀಡಲಾಗಿದೆ.
ಶಿವಮೊಗ್ಗ, ಡಿಸೆಂಬರ್ 21: ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ (Nursing College) ಆಡಳಿತಾಧಿಕಾರಿ ವಿರುದ್ಧ ವಿದ್ಯಾರ್ಥಿಗಳ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಆಡಳಿತಾಧಿಕಾರಿ ಮಂಜುನಾಥ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತಾಧಿಕಾರಿ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಲಾಗಿದ್ದು, ಪರಿಶೀಲಿಸಿ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ. ಸದ್ಯ ಮಂಜುನಾಥ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಪತ್ನಿಯನ್ನು 4 ವರ್ಷಗಳಿಂದ ಗೃಹ ಬಂಧನದಲ್ಲಿಟ್ಟಿದ್ದ ವೈದ್ಯ ಪತಿ
ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬ 22 ವರ್ಷಗಳ ಹಿಂದೆ ಅಗ್ನಿ ಸಾಕ್ಷಿಯಾಗಿ ಕೈ ಹಿಡಿದ ಪತ್ನಿಯನ್ನು 4 ವರ್ಷಗಳಿಂದ ಗೃಹ ಬಂಧನದಲ್ಲಿಟ್ಟಿದ್ದ ಅಮಾನವೀಯ ಘಟನೆ ನಗರದ ದೋಣಿಕಣ ಸಮೀಪದ ಮನೆಯಲ್ಲಿ ನಡೆದಿತ್ತು. ವೃತ್ತಿಯಲ್ಲಿ ವೈದ್ಯನಾಗಿದ್ದರು ಪತ್ನಿಯನ್ನು ಮಾನವೀಯತೆ ಮರೆತು ಹೊರ ಪ್ರಪಂಚಕ್ಕೆ ಹೋಗದಂತೆ ಗೃಹಬಂಧನದಲ್ಲಿ ಇರಿಸಿ ತನ್ನ ವೃತ್ತಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಂಡ ವೈದ್ಯ ರವಿಕುಮಾರ್ ವಿರುದ್ಧ ಆರೋಪ ಕೇಳಿ ಬಂದಿತ್ತು.
ಇದನ್ನೂ ಓದಿ: ಉದ್ಯಮಿ ಸೇರಿ 6 ಜನ ಅಪ್ಪಚ್ಚಿ: ಕಾರಿನ ಮೇಲೆ ಲಾರಿ ಬಿದ್ದಿದ್ದೇಗೆ? ಘಟನೆಗೆ ಕಾರಣವೇನು?
ಚಿಕ್ಕಮಗಳೂರು ನಗರದ ದೋಣಿಕಣ ಸಮೀಪದ ಮನೆಯಲ್ಲಿ ವೈದ್ಯ ತನ್ನ ಪತ್ನಿ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿ ಕಿರುಕುಳ ಕೊಡುತ್ತಿದ್ದರೆಂದು, ಅದರಲ್ಲೂ ಹುಚ್ಚಿ ಎಂದು ಬಿಂಬಿಸಿ ಮಾನಸಿಕ ಜೊತೆಯಲ್ಲಿ ದೈಹಿಕ ಕಿರುಕುಳವನ್ನು ನೀಡಿ ಮನಸೋ ಇಚ್ಛೆ ಥಳಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು. ಇನ್ನೂ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿ ಡಾ, ರವಿಕುಮಾರ್ ಅಲ್ಲಿಂದ ನಾಪತ್ತೆಯಾಗಿದ್ದ.
ಇದನ್ನೂ ಓದಿ: ಇನ್ನೇನು ಕೆಲವೇ ದಿನದಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ತುಂಬು ಗರ್ಭಿಣಿಯ ದಾರುಣ ಹತ್ಯೆ!
ಮಹಿಳೆಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದರು. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದರು. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.