ರಾಜ್ಯದ ಕೆಲ ರೈಲುಗಳ ಸಂಚಾರ ಭಾಗಶಃ ರದ್ದು, ಮಾರ್ಗ ಬದಲಾವಣೆ
ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಯಿಂದಾಗಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಫೆಬ್ರವರಿ 23-28ರ ನಡುವೆ ಕೆಲವು ರೈಲುಗಳು ಭಾಗಶಃ ರದ್ದಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗಗಳು ಬದಲಾಗಿವೆ. ಕೆಲವು ರೈಲುಗಳು ತಡವಾಗಿ ಹೊರಡುತ್ತಿವೆ. ಪ್ರಯಾಣಿಕರು ತಮ್ಮ ರೈಲುಗಳ ಮಾಹಿತಿಯನ್ನು ಪರಿಶೀಲಿಸುವುದು ಅವಶ್ಯಕ.

ಕೆಎಸ್‌ಆರ್ ಬೆಂಗಳೂರು
ಬೆಂಗಳೂರು, ಫೆಬ್ರವರಿ 21: ಸುರಕ್ಷತಾ ಕ್ರಮಗಳು ಮತ್ತು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಟೋನ್ವೆಂಟ್ (Bengaluru Cantonment) ನಿಲ್ದಾಣಗಳ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ಕಾಮಗಾರಿಗಳ ಹಿನ್ನೆಲೆಯಲ್ಲಿ, ಕೆಲ ರೈಲು ಸೇವೆಗಳಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ.
ರೈಲುಗಳ ಸಂಚಾರ ಭಾಗಶಃ ರದ್ದು
- ರೈಲು ಸಂಖ್ಯೆ 16521: ಬಂಗಾರಪೇಟೆ-ಕೆಎಸ್‌ಆರ್ ಬೆಂಗಳೂರು ಮೆಮು ರೈಲು ಫೆಬ್ರವರಿ 24 ಮತ್ತು 27 ರಂದು ಬೈಯಪ್ಪನಹಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಬೈಯಪ್ಪನಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.
- ರೈಲು ಸಂಖ್ಯೆ 56520: ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ರೈಲು ಫೆಬ್ರವರಿ 24 ಮತ್ತು 27 ರಂದು ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ.
- ರೈಲು ಸಂಖ್ಯೆ 17391: ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ, ಡೈಲಿ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 25 ಮತ್ತು 28 ರಂದು ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರು ಬದಲು ಯಶವಂತಪುರದಿಂದ ಪ್ರಾರಂಭವಾಗಲಿದೆ.
- ರೈಲು ಸಂಖ್ಯೆ 07339: ಎಸ್ಎಸ್‌ಎಸ್ ಹುಬ್ಬಳಿ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್ ಪ್ರೆಸ್ ವಿಶೇಷ ರೈಲು ಯಶವಂತಪುರ ರೈಲು ಫೆಬ್ರವರಿ 23 ಮತ್ತು 26 ರಂದು ಯಶವಂತಪುರ ರದ್ದಾಗಿದೆ. ಈ ರೈಲು ಯಶವಂತಪುರದಲ್ಲಿ ಕೊನೆಗೊಳ್ಳುತ್ತದೆ. ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
- ರೈಲು ಸಂಖ್ಯೆ 07340: ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ, ಡೈಲಿ ಎಕ್ಸ್ಪ್ರೆಸ್ ವಿಶೇಷ ರೈಲು ಫೆಬ್ರವರಿ 24 ಮತ್ತು 27 ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರಿನ ಬದಲು ಯಶವಂತಪುರದಿಂದ ಹೊರಡಲಿದೆ.
ರೈಲುಗಳ ಮಾರ್ಗ ಬದಲಾವಣೆ
- ರೈಲು ಸಂಖ್ಯೆ 12658: ಹೊರಡುವ ಕೆಎಸ್‌ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೆ ಸೆಂಟ್ರಲ್ ಡೈಲಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 24 ಮತ್ತು 27 ರಂದು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಎಸ್‌ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ ಮತ್ತು ಬಂಗಾರಪೇಟೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
- ರೈಲು ಸಂಖ್ಯೆ 16593: ಕೆಎಸ್‌ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ಪ್ರೆಸ್ ರೈಲು ಫೆಬ್ರವರಿ 24 ಮತ್ತು 27 ರಂದು ಕೆಎಸ್‌ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
- ರೈಲು ಸಂಖ್ಯೆ 06270: ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ರಾಸೆಂಜರ್ ಸೆಷಲ್ ರೈಲು ಫೆಬ್ರವರಿ 24 ಮತ್ತು 27 ರಂದು ಎಸ್‌ಎಂವಿಟಿ ಬೆಂಗಳೂರು, ಬಾಣಸವಾಡಿ, ಯಶವಂತಪುರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ.
- ರೈಲು ಸಂಖ್ಯೆ 16022: ಮೈಸೂರು-ಡಾ.ಎಂಜಿಆರ್ ಚೆನ್ನೆ ಸೆಂಟ್ರಲ್ ಡೈಲಿ ಎಕ್ಸ್ಪ್ರೆಸ್ ರೈಲು ಫೆಬ್ರವರಿ 24 ಮತ್ತು 27 ರಂದು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಲೊಟ್ಟಿಗೊಲ್ಲಹಳ್ಳಿ, ಬಾಣಸವಾಡಿ, ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರಂ ಮೂಲಕ ಸಂಚರಿಸಲಿದೆ.
- ರೈಲು ಸಂಖ್ಯೆ 06269: ಮೈಸೂರು-ಎಸ್‌ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಫೆಬ್ರವರಿ 24 ಮತ್ತು 27 ರಂದು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಬಾಣಸವಾಡಿ ಮತ್ತು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಗಳ ಮೂಲಕ ಸಂಚರಿಸಲಿದೆ..
ಈ ಮೇಲಿನ ರೈಲುಗಳು (12658, 16593, 06270, 16022 ಮತ್ತು 06269) ಬೆಂಗಳೂರು ಕಂಟೋನ್ವೆಂಟ್ ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
- ರೈಲು ಸಂಖ್ಯೆ 11013: ಲೋಕಮಾನ್ಯ ತಿಲಕ್-ಕೊಯಮತ್ತೂರು ಡೈಲಿ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 23 ಮತ್ತು 26 ರಂದು ಗೌರಿಬಿದನೂರು, ಯಲಹಂಕ, ಲೊಟ್ಟೆಗೊಲ್ಲಹಳ್ಳಿ, ಯಶವಂತಪುರ, ಹೆಬ್ಬಾಳ, ಬಾಣಸವಾಡಿ, ಕಾರ್ಮೆಲಾರಾಮ್ ಮತ್ತು ಹೊಸೂರು ಮಾರ್ಗವಾಗಿ ಸಂಚರಿಸಲಿದೆ.
ಈ ರೈಲುಗಳು ಬೆಂಗಳೂರು ಪೂರ್ವ, ಬೆಂಗಳೂರು ಕಂಟೋನ್ಸೆಂಟ್, ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಸೆಂಟ್ ನಿಲ್ದಾಣಗಳಲ್ಲಿ ನಿಯಮಿತ ನಿಲುಗಡೆ ತಪ್ಪಿರುತ್ತದೆ.
ರೈಲುಗಳ ಮರು ವೇಳಾಪಟ್ಟಿ:
- ರೈಲು ಸಂಖ್ಯೆ 12658: ಫೆಬ್ರವರಿ 24 ಮತ್ತು 27 ರಂದು ಹೊರಡುವ ಕೆಎಸ್‌ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನ ಸೆಂಟ್ರಲ್ ಡೈಲಿ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 24 ಮತ್ತು 27 ಬೆಂಗಳೂರಿನಿಂದ 45 ನಿಮಿಷ ತಡವಾಗಿ ಹೊರಡಲಿದೆ.
- ರೈಲು ಸಂಖ್ಯೆ 16593: ಕೆಎಸ್‌ಆರ್ ಬೆಂಗಳೂರು-ನಾಂದೇಡ್ ಡೈಲಿ ಎಕ್ಸ್ ಪ್ರೆಸ್ ರೈಲು ಫೆಬ್ರವರಿ 24 ಮತ್ತು 27 ರಂದು ಬೆಂಗಳೂರಿನಿಂದ 75 ನಿಮಿಷ ತಡವಾಗಿ ಹೊರಡಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 am, Fri, 21 February 25