ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ

ರಾಯದುರ್ಗ, ಕದಿರಿದೇವರಪಲ್ಲಿ, ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವಿನ ಕೆಲವು ರೈಲುಗಳ ಸಂಚಾರ ಡಿಸೆಂಬರ್ ತಿಂಗಳಲ್ಲಿ ಭಾಗಶಃ ರದ್ದಾಗಲಿದೆ. ಮಾರ್ಗದುರಸ್ತಿ ಮತ್ತು ಯಾರ್ಡ್ ಮಾರ್ಪಾಡು ಕಾಮಗಾರಿಗಳಿಂದಾಗಿ ಈ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಂಖ್ಯೆಗಳನ್ನೂ ಬದಲಾಯಿಸಲಾಗಿದೆ. ಪ್ರಯಾಣಿಕರು ಹೊಸ ವೇಳಾಪಟ್ಟಿಯನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.

ಕರ್ನಾಟಕದ ಈ ರೈಲುಗಳು ಭಾಗಶಃ ರದ್ದು, ತಿರುಪತಿ-ಹುಬ್ಬಳ್ಳಿ ರೈಲು ಸಂಖ್ಯೆ ಬದಲು; ಇಲ್ಲಿದೆ ವಿವರ
ಲೋಂಡಾ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on:Nov 29, 2024 | 11:14 AM

ಬೆಂಗಳೂರು, ನವೆಂಬರ್​ 29: ರಾಯದುರ್ಗ ಮತ್ತು ಕದಿರಿದೇವರಪಲ್ಲಿ ನಿಲ್ದಾಣ ಮತ್ತು ಲೋಂಡಾ (Londa) ಮತ್ತು ಕ್ಯಾಸಲ್ ರಾಕ್ (Castlerock) ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆಯು ಕಾಮಾಗಾರಿ ಕೈಗೊಂಡಿದೆ. ಹೀಗಾಗಿ, ಕೆಲ ರೈಲುಗಳ (Train) ಸಂಚಾರ ಈ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಸಾಮಾಜಿಕ ಎಕ್ಸ್​ ಮುಖಾಂತರ ಮಾಹಿತಿ ನೀಡಿದೆ. ಇನ್ನು, ಕೆಲ ರೈಲುಗಳ ಸಂಖ್ಯೆ ಬದಲಾಯಿಸಲಾಗಿದೆ.

ರಾಯದುರ್ಗ ಮತ್ತು ಕದಿರಿದೇವರಪಲ್ಲಿ ನಿಲ್ದಾಣಗಳ ನಡುವೆ ಯಾರ್ಡ್ ಮಾರ್ಪಾಡು ಮತ್ತು ಅಗತ್ಯ ಸುರಕ್ಷತಾ ಸಂಬಂಧಿತ ಕಾಮಗಾರಿಗಳು ನಡೆಯುತ್ತಿವೆ. ಹಾಗೆಯೇ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ಯಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿ ನಡೆಯುತ್ತಿದೆ.

  1. ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್​​ಪ್ರೆಸ್​ ರೈಲು ಸಂಚಾರ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ಡಿಸೆಂಬರ್ 1 ರಿಂದ 31ರವರೆಗೆ ಭಾಗಶಃ ರದ್ದಾಗಲಿದೆ. ಈ ರೈಲು ಲೋಂಡಾ ನಿಲ್ದಾಣದಲ್ಲಿ ಕೊನೆಗೊಳ್ಳುತ್ತದೆ.
  2. ರೈಲು ಸಂಖ್ಯೆ 17334 ಕ್ಯಾಸಲ್ ರಾಕ್-ಮೀರಜ್ ಡೈಲಿ ಕಾಯ್ದಿರಿಸದ ಎಕ್ಸ್​​ಪ್ರೆಸ್​ ರೈಲು ಸಂಚಾರ ಕ್ಯಾಸಲ್ ರಾಕ್ ಮತ್ತು ಲೋಂಡಾ ನಿಲ್ದಾಣಗಳ ನಡುವೆ ಡಿಸೆಂಬರ್ 1 ರಿಂದ 31ರವರೆಗೆ ಭಾಗಶಃ ರದ್ದಾಗಲಿದೆ. ಈ ರೈಲು ಕ್ಯಾಸಲ್ ರಾಕ್ ಬದಲಿಗೆ ಲೋಂಡಾ ನಿಲ್ದಾಣದಿಂದ ಹೊರಡಲಿದೆ.

ಗುಂತಕಲ್-ಕದಿರಿದೇವರಪಲ್ಲಿ ನಿಲ್ದಾಣಗಳ ನಡುವೆ ರೈಲು ಸಂಚಾರ ಭಾಗಶಃ ರದ್ದು

  1. ರೈಲು ಸಂಖ್ಯೆ 07589 ತಿರುಪತಿ-ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಸಂಚಾರ ಡಿಸೆಂಬರ್ 1 ರಿಂದ 31ರವರೆಗೆ ಗುಂತಕಲ್ ಮತ್ತು ಕದಿರಿದೇವರಪಲ್ಲಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಗುಂತಕಲ್ ನಿಲ್ದಾಣದಲ್ಲಿ ಕೊನೆಗೊಳ್ಳುಲಿದೆ.
  2. ರೈಲು ಸಂಖ್ಯೆ 07590 ಕದಿರಿದೇವರದಲ್ಲಿ ತಿರುಪತಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಸಂಚಾರ ಡಿಸೆಂಬರ್ 2 ರಿಂದ ಜನವರಿ 1ರವರೆಗೆ ಕದಿರಿದೇವರಪಲ್ಲಿ ಮತ್ತು ಗುಂತಕಲ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಗುಂತಕಲ್ ನಿಲ್ಯಾಣದಿಂದ ಪ್ರಯಾಣ ಆರಂಭಿಸಲಿದೆ.

ಇದನ್ನೂ ಓದಿ: ಶಬರಿಮಲೆ ಭಕ್ತರಿಗಾಗಿ ಹುಬ್ಬಳ್ಳಿ-ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

ಗುಂತಕಲ್ ವಿಭಾಗದ ಬುಗ್ಯಾನಿ ಸಿಮೆಂಟ್ ನಗರ ಮತ್ತು ಕೃಷ್ಣಮ್ಮ ಕೋನ ನಿಲ್ದಾಣಗಳ ನಡುವಿನ ರಸ್ತೆ ಮೇಲೇತುವೆ ಕಾಮಗಾರಿ ನವೆಂಬರ್ 28 ರಿಂದ ಡಿಸೆಂಬರ್ 5 ರವರೆಗೆ ನಡೆಯುತ್ತದೆ. ಹೀಗಾಗಿ ಈ ಕೆಳಗಿನ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

  1. ನವೆಂಬರ್ 29 ರಂದು ಹೊರಡುವ ರೈಲು ಸಂಖ್ಯೆ 22883 ಪುರಿ-ಯಶವಂತಪುರ ಗರೀಬ್ ರಥ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ನಂದ್ಯಾಲ್, ಯರಗುಂಟ, ಗೂತ್ತಿ ಫೋರ್ಟ್ ಅನಂತಪುರ ನಿಲ್ದಾಣಗಳ ಮೂಲಕ ಚಲಿಸಲಿದೆ. ಹೀಗಾಗಿ ಡೋನ್​ನಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
  2. ನವೆಂಬರ್ 29ರಂದು ಹೊರಡುವ ರೈಲು ಸಂಖ್ಯೆ 22832 ಯಶವಂತಪುರ-ಹೌರಾ ಸಾಪ್ತಾಹಿಕ ಸೂಪರ್ ಫಾಸ್ಟ್ ಎಕ್ಸ್​ಪ್ರೆಸ್ ರೈಲು ಅನಂತಪುರ-ಗೂತ್ತಿ ಫೋರ್ಟ್ ಯಾಗುಂಟೆ, ನಂದ್ಮಾಲ್ ನಿಲ್ದಾಣಗಳ ಮೂಲಕ ಚಲಿಸಲಿದೆ. ಹೀಗಾಗಿ ಗೂತ್ತಿ ಮತ್ತು ಡೋನ್ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

10 ರೈಲುಗಳಿಗೆ ಮರು ಸಂಖ್ಯೆ

ಜನವರಿ 1, 2025 ರಿಂದ ಜಾರಿಗೆ ಬರುವಂತೆ ದಕ್ಷಿಣ ಮಧ್ಯ ರೈಲ್ವೆ ತನ್ನ ಹತ್ತು ಪ್ಯಾಸೆಂಜರ್ ವಿಶೇಷ ರೈಲುಗಳನ್ನು ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ ಮರು ಸಂಖ್ಯೆ ನೀಡಲು ಅಧಿಸೂಚನೆ ಹೊರಡಿಸಿದೆ. ಬದಲಾವಣೆಗಳ ವಿವರಗಳು ಈ ಕೆಳಗಿನಂತಿವೆ

  1. ಗುಂತಕಲ್-ಹಿಂದೂಪುರ-ಗುಂತಕಲ್ ರೈಲು ಸಂಖ್ಯೆ 07693/07694 ಈಗ 77213/77214 ಎಂದು ಮರುಸಂಖ್ಯೆ ನೀಡಲಾಗಿದೆ.
  2. ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ರೈಲು ಸಂಖ್ಯೆ 07657/07658 ಈಗ 57401/57402 ಎಂದು ಮರುಸಂಖ್ಯೆ ನೀಡಲಾಗಿದೆ.
  3. ತಿರುಪತಿ-ಕದಿದೇವರಪಲ್ಲಿ-ತಿರುಪತಿ ರೈಲು ಸಂಖ್ಯೆ 07589/07590 ಈಗ 57405/57406 ಎಂದು ಮರುಸಂಖ್ಯೆ ನೀಡಲಾಗಿದೆ.
  4. ಚಿಕ್ಕಜಾಜೂರು-ಗುಂತಕಲ್-ಚಿಕ್ಕಜಾಜೂರು​ ರೈಲು ಸಂಖ್ಯೆ 07585/07586 ಈಗ 57416/57415 ಎಂದು ಮರುಸಂಖ್ಯೆ ನೀಡಲಾಗಿದೆ.
  5. ವಿಜಯಪುರ-ರಾಯಚೂರು-ವಿಜಯಪುರ ರೈಲು ಸಂಖ್ಯೆ 07663/07664 ಈಗ 57662/57661 ಎಂದು ಮರುಸಂಖ್ಯೆ ನೀಡಲಾಗಿದೆ.

ಪ್ರಯಾಣಿಕರು ಈ ಮಾರ್ಪಾಡುಗಳನ್ನು ಗಮನದಲ್ಲಿಟ್ಟುಕೊಂಡು ಸುಗಮ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಬೇಕು ಎಂದು ದಕ್ಷಿಣ ಮಧ್ಯ ರೈಲ್ವೆ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Fri, 29 November 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು