AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಟಿಕೆಟ್ ಗ್ರೂಪ್ ಬುಕಿಂಗ್ ಇನ್ನು ಸುಲಭ: ಬರ್ತ್ ಸಂಖ್ಯೆಗೆ ಗರಿಷ್ಠ ಮಿತಿ ಇಲ್ಲ, ಬೆಳಗ್ಗೆ 9 ಗಂಟೆಯಿಂದಲೇ ಅವಕಾಶ

ರೈಲಿನಲ್ಲಿ ಗುಂಪಾಗಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ ಹೊಸ ಸೌಲಭ್ಯ ಕಲ್ಪಿಸಿದೆ. ಮದುವೆ ದಿಬ್ಬಣ, ವಿದ್ಯಾರ್ಥಿಗಳು, ಯಾತ್ರಿಕರ ಗುಂಪುಗಳಿಗೆ ರೈಲು ಟಿಕೆಟ್ ಗ್ರೂಪ್ ಬುಕಿಂಗ್ ಸುಲಭಗೊಳಿಸಲು ನೈಋತ್ಯ ರೈಲ್ವೆಯು ನಿಯಮ ಸರಳಗೊಳಿಸಿದೆ. ಗುಂಪು ಬುಕಿಂಗ್‌ಗೆ ಬರ್ತ್‌ಗಳ ಗರಿಷ್ಠ ಮಿತಿಯನ್ನು ತೆಗೆದುಹಾಕಲಾಗಿದ್ದು, ಅನುಮತಿ ನೀಡುವ ಅಧಿಕಾರವನ್ನು ನಿಲ್ದಾಣ ಮಟ್ಟದ ಅಧಿಕಾರಿಗಳಿಗೆ ನೀಡಲಾಗಿದೆ.

ರೈಲು ಟಿಕೆಟ್ ಗ್ರೂಪ್ ಬುಕಿಂಗ್ ಇನ್ನು ಸುಲಭ: ಬರ್ತ್ ಸಂಖ್ಯೆಗೆ ಗರಿಷ್ಠ ಮಿತಿ ಇಲ್ಲ, ಬೆಳಗ್ಗೆ 9 ಗಂಟೆಯಿಂದಲೇ ಅವಕಾಶ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Nov 20, 2026 | 10:25 AM

Share

ಬೆಂಗಳೂರು, ನವೆಂಬರ್ 20: ಮದುವೆ, ಪ್ರವಾಸ, ಕ್ರೀಡಾಕೂಟ ಅಥವಾ ಇತರ ಕಾರ್ಯಕ್ರಮಗಳಿಗೆ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ. ಗುಂಪು ಅಥವಾ ಬಲ್ಕ್ ಬುಕಿಂಗ್‌ಗೆ ಸಂಬಂಧಿಸಿದ ನಿಯಮಗಳನ್ನು ಸರಳಗೊಳಿಸಿದ್ದು, ಹಿಂದಿನ ಎಲ್ಲ ಮಾರ್ಗಸೂಚಿಗಳನ್ನು ರದ್ದುಪಡಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ.

ಗ್ರೂಪ್ ಬುಕಿಂಗ್ ನಿಯಮ ಯಾರಿಗೆ ಅನ್ವಯ?

ಮದುವೆ ಸಮಾರಂಭಗಳಿಗೆ ಹೋಗುವವರು, ವಿದ್ಯಾರ್ಥಿಗಳು, ಯಾತ್ರಿಕರು, ಕ್ರೀಡಾ ತಂಡಗಳು ಮತ್ತು ಸಾಂಸ್ಕೃತಿಕ ಗುಂಪುಗಳಂತೆ ನಿರ್ದಿಷ್ಟ ಉದ್ದೇಶಕ್ಕಾಗಿ ಪ್ರಯಾಣಿಸುವ ಅಧಿಕೃತ ಗುಂಪುಗಳಿಗೆ ಈ ಸೌಲಭ್ಯ ಸಿಗಲಿದೆ. ಟಿಕೆಟ್ ದೃಢಪಟ್ಟಿರಲಿ, ಆರ್‌ಎಸಿ ಇರಲಿ ಅಥವಾ ಕಾಯುವ ಪಟ್ಟಿಯಲ್ಲಿರಲಿ, ಎಲ್ಲ ದರ್ಜೆಗಳಿಗೂ ಇದು ಅನ್ವಯಿಸುತ್ತದೆ.

ಗ್ರೂಪ್ ಬುಕಿಂಗ್ ಯಾವಾಗ?

ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ನಂತರ, ಅಂದರೆ ಬೆಳಗ್ಗೆ 9 ಗಂಟೆಯಿಂದ ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ಗುಂಪು ಬುಕಿಂಗ್‌ಗೆ ಅವಕಾಶ ಇರುತ್ತದೆ.

ಗ್ರೂಪ್ ಬುಕಿಂಗ್ ಬರ್ತ್‌ಗಳ ಮಿತಿ ರದ್ದು

ಈ ಬಾರಿಯ ಪ್ರಮುಖ ಬದಲಾವಣೆ ಇದು. ಗುಂಪು ಕಾಯ್ದಿರಿಸುವಿಕೆಯಲ್ಲಿ ನೀಡಬಹುದಾದ ಬರ್ತ್‌ಗಳ ಸಂಖ್ಯೆಗೆ ಇದ್ದ ಗರಿಷ್ಠ ಮಿತಿಯನ್ನು ತೆಗೆದುಹಾಕಲಾಗಿದೆ. ಈ ಹಿಂದಿನ ನಿಯಮ ಮತ್ತು ಮಿತಿಗಳನ್ನು ಹಿಂಪಡೆಯಲಾಗಿದೆ. ಈಗ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (ಸಿಆರ್‌ಎಸ್) ಅಥವಾ ನಿಲ್ದಾಣ ವ್ಯವಸ್ಥಾಪಕರು ಗುಂಪು ಕಾಯ್ದಿರಿಸುವಿಕೆಗೆ ಅನುಮತಿ ನೀಡುವ ಅಧಿಕಾರ ಹೊಂದಿರುತ್ತಾರೆ.

ಗ್ರೂಪ್ ಬುಕಿಂಗ್ ಅರ್ಜಿ ಸಲ್ಲಿಕೆ ಹೇಗೆ?

  • ಅರ್ಜಿದಾರರು ತಮ್ಮ ಅರ್ಜಿಯನ್ನು ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.
  • ವಿದೇಶಿ ಪ್ರವಾಸಿಗರು ಅಥವಾ ಅನಿವಾಸಿ ಭಾರತೀಯರ ಬುಕಿಂಗ್ ಹೊರತುಪಡಿಸಿ, ಉಳಿದ ಯಾವುದೇ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್‌ಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ.
  • ಅರ್ಜಿಯಲ್ಲಿ ಎಲ್ಲ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ ಮತ್ತು ವಿಳಾಸ ನೀಡುವುದು ಕಡ್ಡಾಯ.
  • ಪ್ರಯಾಣದ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸಬೇಕು. ಉದ್ದೇಶ ನಮೂದಿಸದಿದ್ದರೆ ಅನುಮತಿ ಸಿಗುವುದಿಲ್ಲ.

ಹಿಂದಿರುಗುವ ಪ್ರಯಾಣಕ್ಕೂ ಅವಕಾಶ

ಹಿಂದಿರುಗುವ ಪ್ರಯಾಣಕ್ಕೂ ಅದೇ ಬುಕಿಂಗ್ ಕಚೇರಿಯಲ್ಲಿ ಗ್ರೂಪ್ ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ ಅದನ್ನು ಪ್ರತ್ಯೇಕ ಪ್ರಯಾಣವೆಂದು ಪರಿಗಣಿಸಲಾಗುತ್ತದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ದುರುಪಯೋಗಕ್ಕೆ ಕಡಿವಾಣ ಹಾಕಲು ಕ್ರಮ

ಅನುಮತಿ ನೀಡಿದ ಎಲ್ಲ ಗ್ರೂಪ್ ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಸಿಆರ್‌ಎಸ್ ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಮತ್ತು ಪ್ರಯಾಣಿಕರ ಪಟ್ಟಿಯ ಪ್ರತಿ ಪುಟದ ಮೇಲೆ ಮೊಹರು ಮತ್ತು ಸಹಿ ಹಾಕಬೇಕು. ಅಕ್ರಮ ಗುಂಪುಗಳು ಬರ್ತ್ ಅಥವಾ ಆಸನಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆದು, ನಿಜವಾದ ಗುಂಪು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವುದು ಈ ಸೌಲಭ್ಯದ ಉದ್ದೇಶ ಎಂದು ರೈಲ್ವೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಅಕ್ವಾನ್ ಚಂಡಮಾರುತ: ಒಡಿಶಾ, ಆಂಧ್ರದಲ್ಲಿ 3 ಲಕ್ಷ ಜನರ ಸ್ಥಳಾಂತರ
ಅಕ್ವಾನ್ ಚಂಡಮಾರುತ: ಒಡಿಶಾ, ಆಂಧ್ರದಲ್ಲಿ 3 ಲಕ್ಷ ಜನರ ಸ್ಥಳಾಂತರ
ಇಂದು ಪ್ರಬೋಧಿನಿ ಏಕಾದಶಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪ್ರಬೋಧಿನಿ ಏಕಾದಶಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ
ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ