Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ.

Hubballi Bengaluru Express: ಶಾಶ್ವತವಾಗಿ ಸ್ಥಗಿತಗೊಳ್ಳಲಿದೆ ಹುಬ್ಬಳ್ಳಿ ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jul 07, 2023 | 10:22 PM

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು (Hubballi Bengaluru Express) ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ. ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ (SWR) ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34 ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: Dharwad News: ದೋಷಯುಕ್ತ ಮೊಬೈಲ್ ಸರಬರಾಜು: ಆಸಿಸ್ ಕಂಪನಿಗೆ ರೂ. 78 ಸಾವಿರ ದಂಡ

ಇತ್ತೀಚೆಗೆ ಆರಂಭಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೂಡ ಬೆಂಗಳೂರಿನಿಂದ ಬೆಳಗ್ಗೆ ಹೊರಟು ಮಧ್ಯಾಹ್ನದ ಮೊದಲು ಹುಬ್ಬಳ್ಳಿ ತಲುಪುವುದನ್ನು ಸ್ಮರಿಸಬಹುದು. ಇದು ಮಧ್ಯಾಹ್ನ ಹುಬ್ಬಳ್ಳಿಯಿಂದ ಹೊರಟು ಸಂಜೆ ತಡವಾಗಿ ಬೆಂಗಳೂರು ತಲುಪುತ್ತದೆ. ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲು ಕೂಡ ಈ ಮಾರ್ಗದಲ್ಲಿ ಸಂಚರಿಸುತ್ತಿದೆ.

ರಾಜ್ಯದ ಇನ್ನಷ್ಟು 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:06 pm, Fri, 7 July 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ