ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ

ಹಬ್ಬಗಳ ಸೀಸನ್ ಶುರುವಾಗುತ್ತಿದ್ದಂತೆಯೇ ರೈಲುಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಪ್ರಯಾಣಿಕರ ದಟ್ಟಣೆ ನಿವಾರಿಸುವುದಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು, ವಿಜಯಪುರ, ಬೆಳಗಾವಿ ಮಧ್ಯೆ ವಿಶೇಷ ರೈಲುಗಳನ್ನು ಘೋಷಿಸಿದೆ. ವಿಶೇಷ ರೈಲುಗಳ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ವಿಶೇಷ ರೈಲುಗಳು: ಇಲ್ಲಿದೆ ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 19, 2024 | 10:16 AM

ಬೆಂಗಳೂರು, ಆಗಸ್ಟ್ 19: ಮುಂಬರುವ ಹಬ್ಬದ ಸೀಸನ್‌ಗಾಗಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಬೆಳಗಾವಿ ನಡುವೆ ಮತ್ತು ಎಸ್‌ಎಂವಿಟಿ ಬೆಂಗಳೂರಿನಿಂದ ವಿಜಯಪುರ ನಿಲ್ದಾಣಗಳ ನಡುವೆ ಸೆಪ್ಟೆಂಬರ್ 5 ರಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.

ರೈಲು ಸಂಖ್ಯೆ 06555 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್, ಸೆಪ್ಟೆಂಬರ್ 5 ರಂದು ಸಂಜೆ 7.30 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06556 ಸೆಪ್ಟೆಂಬರ್ 6 ರಂದು ಬೆಳಿಗ್ಗೆ 8.45 ಕ್ಕೆ ಬೆಳಗಾವಿಯಿಂದ ಹೊರಟು ಅದೇ ದಿನ ರಾತ್ರಿ 8 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.

ವಿಶೇಷ ರೈಲು ವೇಳಾಪಟ್ಟಿ

ರೈಲು ಸಂಖ್ಯೆ 06557 ಯಶವಂತಪುರ-ಬೆಳಗಾವಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 6 ರಂದು ರಾತ್ರಿ 10.15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 06558 ಸೆಪ್ಟೆಂಬರ್ 8 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30 ಕ್ಕೆ ಯಶವಂತಪುರವನ್ನು ತಲುಪಲಿದೆ. ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ಎರಡೂ ನಿಲ್ದಾಣಗಳಲ್ಲಿ ಈ ರೈಲು ನಿಲುಗಡೆ ಹೊಂದಿದೆ.

ಎಲ್ಲೆಲ್ಲಿ ನಿಲುಗಡೆ?

ರೈಲು ಸಂಖ್ಯೆ 06577 ಎಸ್​ಎಂವಿಟಿ ಬೆಂಗಳೂರು-ವಿಜಯಪುರ-ಎಸ್​ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ಸೆಪ್ಟೆಂಬರ್ 5 ಮತ್ತು 7 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 2.05 ಕ್ಕೆ ವಿಜಯಪುರ ತಲುಪಲಿದೆ. ರೈಲು ಸಂಖ್ಯೆ 06578 ವಿಜಯಪುರದಿಂದ ಸೆಪ್ಟೆಂಬರ್ 6 ಮತ್ತು 8ರಂದು ಸಂಜೆ 7 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಬೆಂಗಳೂರು ತಲುಪಲಿದೆ.

ಇದನ್ನೂ ಓದಿ: ಕಪ್ಪು ಟಿ-ಶರ್ಟ್ ಧರಿಸಿ ಕಾರು ಚಲಾಯಿಸುತ್ತೀರಾ? ಸೀಟ್ ಬೆಲ್ಟ್ ಧರಿಸಿದ್ದರೂ ದಂಡಕ್ಕೆ ನೋಟಿಸ್ ಬರಬಹುದು ಎಚ್ಚರ!

ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕ್ಯಾಂಟ್, ತೊರ್ನಗಲ್ಲು, ಹೊಸಪೇಟೆ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿಯಲ್ಲಿ ನಿಲುಗಡೆ ಹೊಂದಿದೆ.

ಬುಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ, ಪ್ರಯಾಣಿಕರು 139 ಗೆ ಕರೆ ಮಾಡಬಹುದು. ಐಆರ್​​ಸಿಟಿಸಿ ವೆಬ್​ಸೈಟ್​ ಮೂಲಕವೂ ಪರಿಶೀಲಿಸಿ ಬುಕಿಂಗ್ ಮಾಡಬಹದು ಎಂದು ರೈಲ್ವೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ