AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್

Monsoon Rain: ಕೇರಳಕ್ಕೆ (Kerala) ಇಂದು (ಜೂ.4) ಮುಂಗಾರು (Southwest Monsoon)ಪ್ರವೇಶಿಸಿದೆ. ಮೇ 26ಕ್ಕೆ ಮುಂಗಾರು ಪ್ರವೇಶ ಮಾಡಲಿದೆ ಎಂದು ಹೇಳಲಾಗಿತ್ತು. ಆದ್ರೆ, ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ. ಇದರ ಬೆನ್ನಲ್ಲೇ ಇತ್ತ ಕರ್ನಾಟಕದಲ್ಲೂ ಮುಂಗಾರು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ, ರಾಜ್ಯದಲ್ಲಿ ಎಷ್ಟು ದಿನ? ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ.

ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್
Karnataka Weather Forecast
ರಮೇಶ್ ಬಿ. ಜವಳಗೇರಾ
|

Updated on: Jun 04, 2026 | 5:48 PM

Share

ಬೆಂಗಳೂರು, (ಜೂನ್ 04): ಕೊನೆಗೂ ಕೇರಳಕ್ಕೆ (Kerala) ಮುಂಗಾರು (Southwest Monsoon) ಪ್ರವೇಶಿಸಿದೆ. ಇಂದು (ಜೂನ್ 04) ಅಧಿಕೃತವಾಗಿ ನೈಋತ್ಯ ಮುಂಗಾರು ಕೇರಳ ಎಂಟ್ರಿಕೊಟ್ಟಿದ್ದು, ಕರ್ನಾಟಕದ (Karnataka) ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಇನ್ನುಳಿಂದಂತೆ ಇಂದಿನಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮುಂಗಾರು ಮಳೆ ವ್ಯಾಪಿಸಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

6 ದಿನ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಕೇರಳಕ್ಕೆ ಮುಂಗಾರು ಪ್ರವೇಶ ಮಾಡಿದ್ದರಿಂದ ಕರ್ನಾಟಕದಲ್ಲೂ ಮಳೆಗಾಲ ಆರಂಭವಾಗಲಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ.  ಹೀಗಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.  ಇನ್ನು ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಕರ್ನಾಟಕ

ಜೂನ್ 4 ರಂದು ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ನಾಳೆಯಿಂದ ಅಂದರೆ ಜೂನ್ 5 ರಿಂದ ಜೂ. 10 ರವರೆಗೆ ಮಳೆಯ ತೀವ್ರತೆ ಗಮನಾರ್ಹವಾಗಿ ಹೆಚ್ಚಾಗಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು (NIK)

ಜೂನ್ 4 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 5 ರಿಂದ ಜೂನ್ 10ರ ವರೆಗೂ ಇಡೀ ಪ್ರದೇಶದಲ್ಲಿ ಅಲ್ಲಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆ ಮತ್ತು ಕೆಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು (SIK)

ಮುನ್ಸೂಚನೆಯ ಸಂಪೂರ್ಣ ಅವಧಿಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9 ರವರೆಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ