Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಮಳೆಯ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.

ಮಳೆImage Credit source: The Hans India
Follow us
ನಯನಾ ರಾಜೀವ್
|

Updated on: Sep 06, 2023 | 7:28 AM

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಬಹಳಷ್ಟು ಮಳೆಯಾಗಲಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೇಡಂನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ನಿರ್ಣಾ, ಬೀದರ್, ಕೋಟ, ಚಿಂಚೋಳಿ, ಬೆಳ್ತಂಗಡಿ, ಅಡಕಿ, ಔರಾದ್, ಮುಧೋಳ, ನೆಲೋಗಿ, ಕಕ್ಕೇರಿ, ಹುಣಸಗಿ, ಕೆಂಭಾವಿ, ಮಂಠಾಳ, ಮುಡಬಿ, ಭಾಲ್ಕಿ, ಇಳಕಲ್, ಕುಡತಿನಿ, ಕಂಪ್ಲಿ, ಕುಂದಾಪುರ, ಧರ್ಮಸ್ಥಳ, ಶೋರಾಪುರ, ಸೈದಾಪುರ, ಯಡ್ರಾಮಿ, ಚಿತ್ತಾಪುರ, ಬಿಳಗಿ, ಕುಷ್ಟಗಿ, ನಲ್ವತವಾಡ, ಸಿಂದಗಿ, ತಾಳಿಕೋಟೆ, ಹುಮನಾಬಾದ್, ಮುದಗಲ್, ಗಬ್ಬೂರು, ಚಿಕ್ಕಬಳ್ಳಾಪುರ, ತೊಂಡೇಭಾವಿ, ಗೋಕರ್ಣ, ಉಪ್ಪಿನಂಗಡಿ, ಮಂಗಳೂರು, ಜೇವರ್ಗಿ,ಆಳಂದ, ಖಜೂರಿ, ಅಫಜಲ್​ಪುರ, ಗುಂಡಗುರ್ತಿ, ಕವಡಿಮಟ್ಟಿ, ಅಥಣಿ, ನಿಪ್ಪಾಣಿ, ಸಂಕೇಶ್ವರ, ನರಗುಂದ, ರೋಣ, ಕಲಬುರಗಿ, ಬಸವನ ಬಾಗೇವಾಡಿ, ಸಂಡೂರು, ಗೌರಿಬಿದನೂರು, ಚಿಂತಾಮಣಿ, ಬಳ್ಳಾರಿ, ಬೆಂಗಳೂರು, ಶಿವಮೊಗ್ಗ, ತರೀಕೆರೆಯಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು ಮಂಗಳವಾರದಿಂದಲೇ ಮಳೆ ಶುರುವಾಗಿದೆ, ಎಚ್​ಎಎಲ್​ನಲ್ಲಿ 26.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ