Karnataka Rain: ಚೌತಿಯಂದು ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ

ಗಣೇಶ ಚತುರ್ಥಿಯಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ 22ರವರೆಗೂ ಮಳೆ ಮುಂದುವರೆಯಲಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

Karnataka Rain: ಚೌತಿಯಂದು ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Indian Express

Updated on: Sep 17, 2023 | 7:48 AM

ಗಣೇಶ ಚತುರ್ಥಿಯಂದು ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ 22ರವರೆಗೂ ಮಳೆ ಮುಂದುವರೆಯಲಿದೆ.  ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

ಧರ್ಮಸ್ಥಳ, ಕೊಟ್ಟಿಗೆಹಾರ, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಪಣಂಬೂರು, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಗೇರುಸೊಪ್ಪ, ಸಿದ್ದಾಪುರ, ಶೃಂಗೇರಿ, ಕಮ್ಮರಡಿ, ವಿರಾಜಪೇಟೆ, ಮಾಣಿ, ಸುಳ್ಯ, ಹೊನ್ನಾವರ, ಕಾರವಾರ, ಅಂಕೋಲಾ, ಬೇಲಿಕೇರಿ, ಕುಂದಾಪುರ, ಲಿಂಗನಮಕ್ಕಿ, ಸಕಲೇಶಪುರ, ಕಂಪ್ಲಿ, ಜಯಪುರ, ಕಳಸ, ಉಡುಪಿ, ಕಾರ್ಕಳ, ಕದ್ರ, ಮಂಕಿ, ಲೋಂಡಾ, ಹುಂಚದಕಟ್ಟೆ, ಪೊನ್ನಂಪೇಟೆ, ಹೊನ್ನಾವರ, ಮುಲ್ಕಿ, ಕ್ಯಾಸಲ್​ರಾಕ್, ಶಿರಾಲಿ, ಬನವಾಸಿ, ಗಂಗಾವತಿ, ರಾಯಲ್ಪಾಡು, ಗಂಗಾವತಿ, ಮಂಚಿಕೆರೆ, ಮಂಡಗದ್ದೆ, ಕೊಪ್ಪ, ಬಾಳೆಹೊನ್ನೂರು, ಆನವಟ್ಟಿ, ಹಿರಿಯೂರಿನಲ್ಲಿ ಮಳೆಯಾಗಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮತ್ತಷ್ಟು ಓದಿ: Karnataka Rain: ಕೊಡಗು ಹಾಗೂ ಕರಾವಳಿಯ 3 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us