AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರ ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

Karnataka Rain: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರು, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Oct 11, 2023 | 7:33 AM

Share

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರ ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಶ್ರೀರಂಗಪಟ್ಟಣ, ಕೊಳ್ಳೇಗಾಲ, ರಾಮನಗರ, ಕನಕಪುರ, ಧರ್ಮಸ್ಥಳ, ಅರಕಲಗೂಡು, ಚನ್ನರಾಯಪಟ್ಟಣ, ಮಾಲೂರು,ಹುಂಚದಕಟ್ಟೆ, ಹೆಸರಘಟ್ಟ, ಹಾರಂಗಿ, ಕೃಷ್ಣರಾಜಸಾಗರ, ಬೆಳ್ಳೂರು, ಸೋಮವಾರಪೇಟೆ, ಹೊಸಕೋಟೆ, ಮಾಗಡಿ, ಸಾಲಿಗ್ರಾಮ, ಜಯಪುರದಲ್ಲಿ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಮಂಡ್ಯ, ಹಾಸನ, ಚಿತ್ರದುರ್ಗ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ.ಕಲಬುರ್ಗಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 18.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ