AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆ ಸಾಧ್ಯತೆ

ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rain: ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆ ಸಾಧ್ಯತೆ
ಮಳೆImage Credit source: Indian Express
ನಯನಾ ರಾಜೀವ್
|

Updated on: Sep 07, 2023 | 7:39 AM

Share

ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ರಾಮನಗರ, ಪಣಂಬೂರು, ಭಾಗಮಂಡಲ, ಕಮ್ಮರಡಿ, ಕುಣಿಗಲ್, ಹೆಬ್ಬೂರು, ಧರ್ಮಸ್ಥಳ, ಅಗ್ರಹಾರ ಕೋಣಂದೂರು, ಎಲೆಕ್ಟ್ರಾನಿಕ್​ಸಿಟಿ, ಮಾಗಡಿ, ಮಂಗಳೂರು, ಮಾಣಿ, ಬೆಳ್ತಂಗಡಿ, ಉಪ್ಪಿನಂಗಡಿ, ಶಿರಾಲಿ, ಅಂಕೋಲಾ, ಬೇಲಿಕೇರಿ, ಜ್ಞಾನಭಾರತಿ ಬಿಯು ಕ್ಯಾಂಪಸ್, ದೊಡ್ಡಬಳ್ಳಾಪುರ, ಕೊಲ್ಲೂರು, ಕಾರವಾರ, ಕದ್ರಾ, ಸಿದ್ದಾಪುರ, ಮಂಚಿಕೇರಿ, ಕ್ಯಾಸಲ್​ರಾಕ್, ಮುದಗಲ್, ನಾಪೊಕ್ಲು, ಹುಂಚದಕಟ್ಟೆ, ಲಿಂಗನಮಕ್ಕಿ, ಶೃಂಗೇರಿ, ಕೊಪ್ಪ, ಅಜ್ಜಂಪುರ, ಬೆಂಗಳೂರು ನಗರ, ಬೆಂಗಳೂರು ಎಚ್​ಎಎಲ್​ ವಿಮಾನ ನಿಲ್ದಾಣ, ಉತ್ತರಹಳ್ಳಿ, ಚನ್ನಗಿರಿ, ಸಂತೆಬೆನ್ನೂರು, ದಾವಣಗೆರೆ, ಹೊಸದುರ್ಗ, ತೊಂಡೆಭಾವಿ, ತಿಪಟೂರು, ಸುಳ್ಯ, ಸಿದ್ದಾಪುರ, ಮಂಕಿ, ಕುಮಟಾ, ಬನವಾಸಿ, ಯಲ್ಲಾಪುರ, ಮುಂಡಗೋಡು, ಹಳಿಯಾಳ, ಸವಣೂರು, ರಾಣೆಬೆನ್ನೂರು, ಹುಮ್ನಾಬಾದ್, ಶಿವಮೊಗ್ಗ, ಆನವಟ್ಟಿ, ಭದ್ರಾವತಿ, ಮಂಡಗದ್ದೆ, ಚಿಕ್ಕಮಗಳೂರು, ಕೊಟ್ಟಿಗೆಹಾರ, ಜಯಪುರ, ಬಾಳೆಹೊನ್ನೂರು, ಎನ್​ಆರ್ ಪುರ, ಯುಗಟಿ, ಸಕಲೇಶಪುರ, ಸುತ್ತೂರು, ಜಿಕೆವಿಕೆ, ಹೊಸಕೋಟೆ, ಸಿರುಗುಪ್ಪ, ಹರಪನಹಳ್ಳಿ, ಹೊನ್ನಾಳಿ, ಚಿತ್ರದುರ್ಗ, ತುಮಕೂರು, ಮಧುಗಿರಿ, ಚನ್ನಪಟ್ಟಣ, ಕನಕಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ ಬೀದರ್, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿಯು 40-45ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಗುರುವಾರವೂ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!