Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೆಪ್ಟೆಂಬರ್ 6ರವರೆಗೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮಳೆImage Credit source: Zee News
Follow us
ನಯನಾ ರಾಜೀವ್
|

Updated on: Aug 31, 2023 | 7:50 AM

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸಿಂಧನೂರು, ಕೆರೂರು, ಲಿಂಗಸುಗೂರು, ಮುದಗಲ್, ಮಂಕಿ, ಸೇಡಬಾಳ, ನರಗುಂದ, ಬೇವೂರು, ಬಾದಾಮಿ, ಬಸವನಬಾಗೇವಾಡಿ, ತಾಳಿಕೋಟೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆ ಹಗುರ ಮಳೆಯಾಗಲಿದೆ, ಎಚ್​ಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷಗಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಲ್ಲಿ ವಾಡಿಕೆಗಿಂತ ಉಷ್ಣಾಂಶ ಹೆಚ್ಚಾಗಿದೆ, ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಿದೆ. ಬೆಂಗಳೂರಲ್ಲೂ ಸುಡುವ ವಾತಾವರಣ ನಿರ್ಮಾಣವಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ

ರಾಜ್ಯದಲ್ಲಿ ಶೇ.20ರಷ್ಟು ಮಳೆಯ ಕೊರತೆ ಉಂಟಾಗಿದೆ, ಸೆಪ್ಟೆಂಬರ್ 8 ರಿಂದ ಎರಡು ವಾರಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್​ನಲ್ಲಿ ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್​ ಇರಬೇಕು ಆದರೆ 31-32 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗುತ್ತಿದೆ. ಭಾರಿ ಮಳೆ ಮೂನ್ಸುಚನೆ ಕಾರಣ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ