ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೆಪ್ಟೆಂಬರ್ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಸಿಂಧನೂರು, ಕೆರೂರು, ಲಿಂಗಸುಗೂರು, ಮುದಗಲ್, ಮಂಕಿ, ಸೇಡಬಾಳ, ನರಗುಂದ, ಬೇವೂರು, ಬಾದಾಮಿ, ಬಸವನಬಾಗೇವಾಡಿ, ತಾಳಿಕೋಟೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆ ಹಗುರ ಮಳೆಯಾಗಲಿದೆ, ಎಚ್ಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷಗಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ವಾಡಿಕೆಗಿಂತ ಉಷ್ಣಾಂಶ ಹೆಚ್ಚಾಗಿದೆ, ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಬೆಂಗಳೂರಲ್ಲೂ ಸುಡುವ ವಾತಾವರಣ ನಿರ್ಮಾಣವಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಸಾಧ್ಯತೆ
ರಾಜ್ಯದಲ್ಲಿ ಶೇ.20ರಷ್ಟು ಮಳೆಯ ಕೊರತೆ ಉಂಟಾಗಿದೆ, ಸೆಪ್ಟೆಂಬರ್ 8 ರಿಂದ ಎರಡು ವಾರಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಆಗಸ್ಟ್ನಲ್ಲಿ ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಇರಬೇಕು ಆದರೆ 31-32 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಭಾರಿ ಮಳೆ ಮೂನ್ಸುಚನೆ ಕಾರಣ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನ ನೀಡಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ