Karnataka Rain: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಮಳೆ

|

Updated on: Sep 12, 2023 | 7:20 AM

ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಸೆಪ್ಟೆಂಬರ್ 16-17ರಂದು ಅತ್ಯಧಿಕ ಮಳೆ ಸುರಿಯಲಿದೆ.

Karnataka Rain: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಮಳೆ
ಮಳೆ
Follow us on

ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ, ಸೆಪ್ಟೆಂಬರ್ 16-17ರಂದು ಅತ್ಯಧಿಕ ಮಳೆ ಸುರಿಯಲಿದೆ.

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೂಡ ಸೆಪ್ಟೆಂಬ್ರ 16ರಿಂದ ಮಳೆ ಹೆಚ್ಚಾಗಲಿದೆ.

ನೈಋತ್ಯ ಮುಂಗಾರು ರಾಜ್ಯಾದ್ಯಂತ ಸಾಮಾನ್ಯವಾಗಿತ್ತು, ಕರಾಳಿಯಲ್ಲಿ ವ್ಯಾಪಕವಾಗಿ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಸುಳ್ಯ, ಭಾಗಮಂಡಲ, ಪಣಂಬೂರು, ಪುತ್ತೂರು, ಕೆಂಭಾವಿ, ಕಾರ್ಕಳ, ಜೇವರ್ಗಿ, ನೆಲೋಗಿ, ಯಡ್ರಾಮಿ, ಶೋರಾಪುರ, ನಾಪೋಕ್ಲು, ಮಂಗಳೂರು ವಿಮಾನ ನಿಲ್ದಾಣ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿ, ಕೋಟ, ಕುಂದಾಪುರ, ಕುಮಟಾ, ನಿಪ್ಪಾಣಿ, ದೇವರಹಿಪ್ಪರಗಿ, ಚಿಂಚೋಳಿ, ಸುಳೆಪೇಟೆ, ಶಹಾಪುರ, ಸೈದಾಪುರ, ಶೃಂಗೇರಿ, ಜಯಪುರ, ಮಾಣಿ, ಹೊನ್ನಾವರ, ಗೇರುಸೊಪ್ಪ, ಗೋಕರ್ಣ, ಕದ್ರಾ, ಗದಗ, ಲೋಂಡಾ, ಕಲಬುರಗಿ, ಖಜೂರಿ, ಅಫಜಲಪುರ, ದೇವದುರ್ಗ, ಗಬ್ಬೂರು, ವಿರಾಜಪೇಟೆ, ಲಿಂಗನಮಕ್ಕಿ, ತಾಳಗುಪ್ಪ, ಕೊಪ್ಪ, ಬಾಳೆ ಹೊನ್ನೂರು, ಬೇಲೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 16ರವರೆಗೆ ಮಳೆ

ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:35 am, Mon, 11 September 23