AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ 7 ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್​ ಘೋಷಣೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Rain: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಈ 7 ಜಿಲ್ಲೆಗಳಲ್ಲಿ ಮಳೆ ಜೋರು, ಯೆಲ್ಲೋ ಅಲರ್ಟ್​ ಘೋಷಣೆ
ಮಳೆImage Credit source: Mint
ನಯನಾ ರಾಜೀವ್
|

Updated on: Oct 02, 2023 | 7:30 AM

Share

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಧರ್ಮಸ್ಥಳ, ಕ್ಯಾಸಲ್​ರಾಕ್, ಕೊಟ್ಟಿಗೆಹಾರದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಣಿ, ಭಾಗಮಂಡಲ, ಉಪ್ಪಿನಂಗಡಿ, ವಿರಾಜಪೇಟೆ, ಅಂಕೋಲಾ, ಕೊಲ್ಲೂರಿನಲ್ಲೂ ಹೆಚ್ಚು ಮಳೆಯಾಗಿದೆ.

ಗೋಕರ್ಣ, ಸಿದ್ದಾಪುರ,ಮಡಿಕೇರಿ, ಕುಮಟಾ, ಮಂಚಿಕೆರೆ, ಕದ್ರಾ, ಪುತ್ತೂರು, ಲೋಂಡಾ, ನಾಪೋಕ್ಲು, ಪೊನ್ನಂಪೇಟೆ, ಸಕಲೇಶಪುರ, ಗೇರುಸೊಪ್ಪ, ಪಣಂಬೂರು, ಶಿರಾಲಿ, ಯಲ್ಲಾಪುರ, ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕಲಬುರಗಿ, ಹುಂಚದಕಟ್ಟೆ, ತಾಳಗುಪ್ಪ, ಲಿಂಗನಮಕ್ಕಿ, ಸಿದ್ದಾಪುರ, ಕಿರವತ್ತಿ, ಮುಂಡಗೋಡ, ಶೃಂಗೇರಿ, ಕಮ್ಮರಡಿ, ಕಳಸ, ಹಾರಂಗಿ, ಸುಳ್ಯ, ಹಳಿಯಾಳ, ಬನವಾಸಿ, ಕೋಟ, ಹುಕ್ಕೇರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಧಾರವಾಡ, ಕಲಘಟಗಿ, ಸೇಡಂ, ಸೋಮವಾರಪೇಟೆ, ಬೇಲೂರು, ಹುಣಸೂರು, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rain: ಕರಾವಳಿ ಜಿಲ್ಲೆಗಳಲ್ಲಿ ಸೆ.30ರಿಂದ ಮೂರು ದಿನಗಳ ಕಾಲ ವರುಣನ ಆರ್ಭಟ ಜೋರು, ಆರೆಂಜ್ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 32.7 ಡಿಗ್ರಿ ಸೆಲ್ಸಿಯಸ್​ ಶಿರಾಲಿಯಲ್ಲಿ ದಾಖಲಾಗಿದೆ. ಅತಿ ಕಡಿಮೆ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ , ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?