Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ.

Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆ ಸಾಧ್ಯತೆ
ಮಳೆ
Image Credit source: Business Standard

Updated on: Sep 05, 2023 | 7:51 AM

ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 11ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ.

ಅಥಣಿ, ಗದಗ, ಕುಕನೂರು,ನಿರ್ನಾ, ಬಬಲೇಶ್ವರ, ರೋಣ, ಇಳಕಲ್, ಹುಮನಾಬಾದ್, ಕಲಬುರಗಿ, ಗುಂಡಗುರ್ತಿ, ಕುಷ್ಟಗಿ, ವಿಜಯಪುರ, ತಿಕ್ಕೋಟ, ಜೇವರ್ಗಿ, ಯಡ್ರಾಮಿ, ಮಾನ್ವಿ, ಸಿಂಧನೂರು, ಸೇಡಬಾಳ, ಗಂಗಾವತಿ, ಯಲಬುರ್ಗಾ, ತಾವರೆಕೆರೆ, ತಾಳಿಕೋಟೆ, ಔರಾದ್, ಭಾಲ್ಕಿ, ಚಿತ್ತಾಪುರ, ಸೇಡಂ, ಕೆಂಭಾವಿ, ಶಹಾಪುರ, ಮಸ್ಕಿ, ಮುದಗಲ್, ಕುರುಗೋಡು, ಸಂಡೂರು, ಅಣ್ಣಿಗೇರಿ, ಮುನಿರಾಬಾದ್, ಕೂಡಲಸಂಗಮ, ರಬಕವಿ, ಬಸವನಬಾಗೇವಾಡಿ, ನೆಲೋಗಿ, ಅಡಕಿ, ಮಂಠಾಳ, ನಾರಾಯಣಪುರ, ಕುರ್ಡಿ, ಮುರಗೋಡ, ಸಿರುಗುಪ್ಪ, ಕಂಪ್ಲಿ, ಹೊಸಪೇಟೆ, ಹಡಗಲಿ, ಕ್ಯಾಸಲ್​ರಾಕ್, ಸಂಕೇಶ್ವರ, ಯದವಾಡ, ರಾಯಭಾಗ, ಸುತಗಟ್ಟಿ ಮುಟ್ಟಿಕೊಪ್ಪ, ಧಾರವಾಡ ಪಿಟಿಒ, ಹುಬ್ಬಳ್ಳಿ, ಹಾವೇರಿ, ಸವಣೂರು, ಶಿರಹಟ್ಟಿ, ನರಗುಂದ, ಗಂಗಾವತಿ, ಬೇವೂರು, ಬಾದಾಮಿ, ಲೋಕಾಪುರ, ಮಹಾಲಿಂಗಪುರ, ಬಿಳಿಗಿ, ಬಾಗಲಕೋಟೆ, ಆಲಮಟ್ಟಿ, ನಲ್ವತವಾಡ, ಕಮಲಾಪುರ, ಮಹಾಗಾಂವ್, ಮುಧೋಳ, ಹುಣಸಗಿ, ಲಿಂಗಸುಗೂರು, ಮುಡಬಿ, ಬಳ್ಳಾರಿ, ಕುಡಿತಿನಿ, ಹೊಸಕೋಟೆಯಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಮುಂದಿನ 3 ದಿನ ಕರ್ನಾಟಕದ 12 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us