Karnataka Rain: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಒಂದು ವಾರ ಭಾರಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಆಗಸ್ಟ್​ 29ರವರೆಗೆ ಮಳೆಯಾಗಲಿದೆ.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಒಂದು ವಾರ ಭಾರಿ ಮಳೆ ಸಾಧ್ಯತೆ
ಮಳೆ
Image Credit source: The Economic Times

Updated on: Aug 23, 2023 | 7:25 AM

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಆಗಸ್ಟ್​ 29ರವರೆಗೆ ಮಳೆಯಾಗಲಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದು ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಲಕ್ಷಣಗಳಿವೆ. ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೆಹಲಿ-ಎನ್​ಸಿಆರ್​ನಲ್ಲಿ ಮಳೆಯಾಗಿದೆ, ಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಜನಜೀವನ ದುಸ್ತರವಾಗಿತ್ತು, ಶಾಖದಿಂದ ಮುಕ್ತಿ ಸಿಕ್ಕಂತಾಗಿದೆ.

ಆಗಸ್ಟ್ 23 ಮತ್ತು 24 ರಂದು ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವ್ಯಕ್ತಪಡಿಸಿದೆ.

Karnataka Rain: ಕರ್ನಾಟಕದ ಕರಾವಳಿಯಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ

2009ರಿಂದ ಆಗಸ್ಟ್ ತಾಪಮಾನವನ್ನು ಗಮನಿಸಿದರೆ 2014ರಲ್ಲಿ 39.4 ಡಿಗ್ರಿ, 2011ರಲ್ಲಿ 38.2 ಡಿಗ್ರಿ ಇತ್ತು. ಉಳಿದ ವರ್ಷಗಳಲ್ಲಿ ತಾಪಮಾನವು 37-38 ಡಿಗ್ರಿಗಳ ನಡುವೆ ಇತ್ತು. ಈಗ 33 ಡಿಗ್ರಿ ಸೆಲ್ಸಿಯಸ್​ನಿಂದ 36 ಡಿಗ್ರಿ ಸೆಲ್ಸಿಯಸ್​ನಷ್ಟಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us