Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆ
ಮಳೆ
Image Credit source: Mint

Updated on: Aug 24, 2023 | 7:36 AM

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕ್ಯಾಸಲ್ ರಾಕ್ ಹಾಗೂ ಕುಂದಾಪುರದಲ್ಲಿ ಮಳೆಯಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಭಾರತದಲ್ಲಿ ಮುಂಗಾರು ಚುರುಕಾಗಿದೆ, ಮುಂದಿನ ಎರಡು ದಿನಗಳ ಕಾಲ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಇದಲ್ಲದೆ ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿ ಹಾಗೂ ಈಶಾನ್ಯ ಭಾರತದಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಓದಿ: Karnataka Rain: ಕರ್ನಾಟಕದ ಕರಾವಳಿಯಲ್ಲಿ ಮುಂದಿನ ಒಂದು ವಾರ ಭಾರಿ ಮಳೆ ಸಾಧ್ಯತೆ

ಹವಾಮಾನ ಇಲಾಖೆ ಪ್ರಕಾರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಆಗಸ್ಟ್ 24 ರಿಂದ 26ರವರೆಗೆ, ಪಂಜಾಬ್, ಹರ್ಯಾಣ, ಚಂಡೀಗಢ ಹಾಗೂ ರಾಜಸ್ಥಾನದಲ್ಲಿ ಆಗಸ್ಟ್ 24 ರಂದು ಮಳೆಯಾಗಲಿದೆ. ಛತ್ತೀಸ್​ಗಢ ಹಾಗೂ ಮಧ್ಯಪ್ರದೇಶದಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಐದು ದಿನಗಳ ಕಾಲ ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ, ಆಂಧ್ರಪ್ರದೇಶ, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕಾರೈಕಲ್​ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us