AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಟಿಂಗ್ ಲಿಸ್ಟ್​ನಲ್ಲಿರುವ ಅಂತರ್​ರಾಜ್ಯ ರೈಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಡಿ; ನೈಋತ್ಯ ರೈಲ್ವೆ ಮನವಿ

Southwest Railways: ವೇಟಿಂಗ್​ ಲಿಸ್ಟ್​ನಲ್ಲಿರುವ ಅಂತರ್​ರಾಜ್ಯ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಬಾರದು. ರೈಲು ಹೊರಡುವ 30 ನಿಮಿಷ ಮೊದಲೇ ಟಿಕೆಟ್ ರದ್ದುಗೊಳಿಸಿ ಹಣ ಮರುಪಾವತಿ ಪಡೆಯಬಹುದಾಗಿದೆ ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

ವೇಟಿಂಗ್ ಲಿಸ್ಟ್​ನಲ್ಲಿರುವ ಅಂತರ್​ರಾಜ್ಯ ರೈಲು ಪ್ರಯಾಣಿಕರು ನಿಲ್ದಾಣಕ್ಕೆ ಬರಬೇಡಿ; ನೈಋತ್ಯ ರೈಲ್ವೆ ಮನವಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on:Apr 23, 2021 | 8:15 PM

Share

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಅಂತರ್​ರಾಜ್ಯ ರೈಲುಗಳಲ್ಲಿ ವೇಟಿಂಗ್​​ ಲಿಸ್ಟ್​​ನಲ್ಲಿರುವ ರೈಲು ಪ್ರಯಾಣಿಕರಿಗೆ ಪ್ರಯಾಣಿಸುವುದಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿದೆ. ವೇಟಿಂಗ್​ ಲಿಸ್ಟ್​ನಲ್ಲಿರುವ ಅಂತರ್​ರಾಜ್ಯ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಬಾರದು. ರೈಲು ಹೊರಡುವ 30 ನಿಮಿಷ ಮೊದಲು ಟಿಕೆಟ್ ರದ್ದುಗೊಳಿಸಿ ಹಣ ಮರುಪಾವತಿ ಪಡೆಯಬಹುದಾಗಿದೆ ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ.

ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಆರಂಭವಾದರೂ ನಾಳೆ ಮತ್ತು ನಾಡಿದ್ದು ರೈಲ್ವೆ ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ. ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಕ್ಕೆ ರೈಲುಗಳ ಸಂಚಾರ ಮುಂದುವರೆಯಲಿದೆ. ಯಥಾಸ್ಥಿತಿಯಲ್ಲಿ ದಿನನಿತ್ಯ ಓಡಾಡುವ ರೈಲುಗಳ ಜೊತೆಗೆ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ನರೇಂದ್ರ  ಮಾಹಿತಿ ನೀಡಿದ್ದಾರೆ.

ಇಂದಿನಿಂದಲೇ ಆರಂಭವಾಗಲಿದೆ ವಾರಾಂತ್ಯದ ಕರ್ಫ್ಯೂ ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು, 24×7 ಕೆಲಸ ಮಾಡುವ ಕಾರ್ಖಾನೆ ಮತ್ತು ಸಂಸ್ಥೆಗಳ ನೌಕರರು ವಾರಾಂತ್ಯದ ಕರ್ಫ್ಯೂನಲ್ಲೂ ಕೆಲಸಕ್ಕೆ ಹೋಗಬಹುದಾಗಿದೆ. ಅದರೆ ಕೆಲಸಕ್ಕೆ ಹೋಗುವಾಗ ಅವರು ತಾವು ಕೆಲಸ ಮಾಡುವ ಸಂಸ್ಥೆಯ ಗುರುತಿನ ಕಾರ್ಡ್​ ಅನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು.

ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ. ವಾರಾಂತ್ಯದ ಕರ್ಫ್ಯೂಗೆ ಬೆಂಗಳೂರಿನ ಜನತೆ ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್‌ ಪಂತ್​ ಮನವಿಪೂರ್ವಕ ಎಚ್ಚರಿಕೆ ನೀಡಿದ್ದಾರೆ. ರಾತ್ರಿ 9ರಿಂದ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್​ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್‌ ಬಳಸಿ ಹೊರಗೆ ಬಂದರೆ ಕೂಡಲೇ ಬಂಧಿಸಲಾಗುವುದು. ಅನುಮತಿ ಪಡೆದಿರುವವರು ಕೂಡ ಅನಗತ್ಯವಾಗಿ ಓಡಾಡದಿರಿ ಎಂದು ಅವರು ಮಾಧ್ಯಮಗಳ ಮೂಲಕ ನಾಗರಿಕರಿಗೆ ತಿಳಿಸಿದ್ದಾರೆ.

ಮದುವೆಗೆ ಅನುಮತಿ ಪಡೆದವರು ರಾತ್ರಿ 9ರ ಒಳಗೆ ಕಲ್ಯಾಣ ಮಂಟಪ ಸೇರಿಕೊಳ್ಳಬೇಕು. ವೈದ್ಯಕೀಯ ತುರ್ತು ಸೇವೆಗಾಗಿ ಸಂಖ್ಯೆ 100ಕ್ಕೆ ಕರೆ ಮಾಡಬಹುದು. ತೊಂದರೆಗೀಡಾದವರಿಗೆ ಪೊಲೀಸರಿಂದ ಅವಶ್ಯವಾಗಿ ಸಹಕಾರ ಸಿಗುತ್ತದೆ. ಸಹಾಯಕ್ಕಾಗಿ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಲಾಗಿದೆ. ಎಂದು ಅವರು ತಿಳಿಸಿದರು.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(southwest railways request do not come to rail station to inter state waiting list passengers)

Published On - 7:51 pm, Fri, 23 April 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ